ಹೊರ ರಾಜ್ಯಗಳಿಂದ ಬರುವವರಿಗೆ ಸೋಂಕಿನ ಲಕ್ಷಣಗಳಿದ್ದರೆ ಮಾತ್ರ ನೆಗೆಟಿವ್ ವರದಿ ಕಡ್ಡಾಯ

Update: 2021-05-07 17:48 GMT

ಬೆಂಗಳೂರು, ಮೇ 7: ದಿನೇ ದಿನೇ ಕರ್ನಾಟಕ ರಾಜ್ಯದಲ್ಲಿ ಕೊರೋನ ಸೋಂಕು ಹೆಚ್ಚಾಗಿರುವ ಕಾರಣ ಹೊರ ರಾಜ್ಯಗಳಿಂದ ಆಗಮಿಸುವವರಲ್ಲಿ ಕೋವಿಡ್ ಸೋಂಕಿನ ಲಕ್ಷಣಗಳಿದ್ದವರು ಮಾತ್ರವೇ ಕೊರೋನ ನೆಗೆಟಿವ್ ವರದಿ ನೀಡುವಂತೆ ಆರೋಗ್ಯ ಇಲಾಖೆ ತಿಳಿಸಿದೆ.

ಶುಕ್ರವಾರ ಈ ಕುರಿತಂತೆ ಸುತ್ತೋಲೆ ಹೊರಡಿಸಿರುವಂತ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಝಾವೇದ್ ಅಖ್ತರ್, ಈ ಮೊದಲು ಕೊರೋನ ಸೋಂಕಿನ ಪ್ರಕರಣಗಳು ಹೆಚ್ಚು ಹೆಚ್ಚು ವರದಿಯಾಗುತ್ತಿದ್ದ ಮಹಾರಾಷ್ಟ್ರ, ಕೇರಳ, ಪಂಜಾಬ್ ಹಾಗೂ ಚಂಡೀಗಢದಿಂದ ರಾಜ್ಯಕ್ಕೆ ಬರುವ ವಿಮಾನ ಪ್ರಯಾಣಿಕರಿಗೆ ಕಡ್ಡಾಯವಾಗಿ 72 ಗಂಟೆ ಹಿಂದೆ ಪರೀಕ್ಷೆಗೆ ಒಳಪಟ್ಟ ಆರ್‍ಟಿಪಿಸಿಆರ್ ಮೂಲಕ ಪರೀಕ್ಷಿಸಿದ ಕೊರೋನ ನೆಗೆಟಿವ್ ವರದಿ ಹಾಜರುಪಡಿಸುವುದನ್ನು ಕಡ್ಡಾಯಗೊಳಿಸಲಾಗಿತ್ತು.

ಇದೀಗ ಮುಂದುವರಿದು, ಸದ್ಯದ ಪರಿಸ್ಥಿತಿಯಲ್ಲಿ ಇಂತಹ ನಿಯಮವನ್ನು ನಿಲ್ಲಿಸಲು ಸೂಚಿಸಲಾಗುತ್ತಿದೆ. ಕೂಡಲೇ ಮಹಾರಾಷ್ಟ್ರ, ಕೇರಳ, ಪಂಜಾಬ್ ಹಾಗೂ ಚಂಡೀಗಢದಿಂದ ಬರುವವರಿಗೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯಗೊಳಿಸಿದ ಆದೇಶವನ್ನು ರದ್ದು ಪಡಿಸಲಾಗಿದೆ. ಆದರೆ, ಕೋವಿಡ್ ಸೋಂಕಿನ ಗುಣ ಲಕ್ಷಣ ಹೊಂದಿರುವ ವಿಮಾನ ಪ್ರಯಾಣಿಕರು ಆರ್‍ಟಿಪಿಸಿಆರ್ ಮೂಲಕ ಪರೀಕ್ಷೆಗೆ ಒಳಪಟ್ಟ ನೆಗೆಟಿವ್ ವರದಿಯನ್ನು ನೀಡಬೇಕು ಎಂಬುದಾಗಿ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News