ನನ್ನ ಕ್ಷೇತ್ರದಲ್ಲಿ ಕೋವಿಡ್‌ನಿಂದ ಮೃತರ ಕುಟುಂಬಕ್ಕೆ ತಲಾ 1 ಲಕ್ಷ ರೂ. ಸಹಾಯಧನ : ಸಚಿವ ಸೋಮಶೇಖರ್

Update: 2021-05-08 08:25 GMT

ಬೆಂಗಳೂರು: ಕೋವಿಡ್ 19ರ ಸನ್ನಿವೇಶದಲ್ಲಿ ನನ್ನ ಕ್ಷೇತ್ರದ ಜನತೆಯ ಸೇವಕನಾಗಿ ಅವರ ಅವಶ್ಯಕತೆಗಳನ್ನು ಪೂರೈಸುವುದು ನನ್ನ ಕರ್ತವ್ಯ. ಈ ಹಿನ್ನೆಲೆಯಲ್ಲಿ ನನ್ನ ಕ್ಷೇತ್ರದಲ್ಲಿ ಕೋವಿಡ್‌ನಿಂದ ಮೃತಪಟ್ಟ ಕುಟುಂಬದವರಿಗೆ ತಲಾ 1 ಲಕ್ಷ ರೂ. ಸಹಾಯಧನವನ್ನು ವೈಯುಕ್ತಿಕವಾಗಿ ನೀಡುವ ವ್ಯವಸ್ಥೆ ಮಾಡಿದ್ದೇನೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.

ತಲಾ 1 ಲಕ್ಷ ಪರಿಹಾರ ಸಹಾಯಧನ ವಿತರಣಾ ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಶ್ರೀಕ್ಷೇತ್ರದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಚಾಲನೆ ನೀಡಿದರು.

ನಂತರ ಮಾತನಾಡಿದ ಸಚಿವರು, ಯಶವಂತಪುರ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ವಾರ್ಡ್ ಹಾಗೂ ಪಂಚಾಯಿತಿ ವ್ಯಾಪ್ತಿಯ ಜನರಿಗೆ ವೈಯುಕ್ತಿಕವಾಗಿ ಪರಿಹಾರ ನೀಡುತ್ತಿದ್ದೇನೆ. ಇಂದಿನಿಂದ ನಿತ್ಯ ಒಂದೊಂದು ವಾರ್ಡ್‌ನಲ್ಲಿಯೂ ಸೋಂಕಿನಿಂದ ಮೃತಪಟ್ಟ ಕುಟುಂಬಸ್ಥರಿಗೆ ತಲಾ 1 ಲಕ್ಷ ನಗದು ವಿತರಣೆ ಮಾಡಲಾಗುವುದು. ಇಂದು ಕೆಂಗೇರಿ ವಾರ್ಡ್ 159 ಲ್ಲಿ 27 ಕುಟುಂಬಗಳಿಗೆ ತಲಾ ಒಂದು ಲಕ್ಷ ರೂ. ವಿತರಣೆ ಮಾಡಿದ್ದೇವೆ. ನಾಳೆಯಿಂದ 17 ಪಂಚಾಯಿತಿ ವ್ಯಾಪ್ತಿ ಹಾಗೂ 5 ವಾರ್ಡ್‌ನ ಜನರಿಗೆ ಧನಸಹಾಯ ಮಾಡಲಾಗುವುದು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News