ಹಿಮಾಚಲದಲ್ಲಿ ಟ್ರಂಪ್, ಅಮಿತಾಬ್ ಬಚ್ಚನ್ ಹೆಸರಲ್ಲಿ ಇ-ಪಾಸ್ ನೀಡಿಕೆ: ಎಫ್ಐಆರ್ ದಾಖಲು

Update: 2021-05-08 10:13 GMT

ಶಿಮ್ಲಾ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗು ಬಾಲಿವುಡ್ ಸ್ಟಾರ್ ಅಮಿತಾಬ್ ಬಚ್ಚನ್ ಅವರ ಹೆಸರಿನಲ್ಲಿ ಎರಡು ಇ-ಪಾಸ್ ನೀಡಲಾಗಿದೆ ಎಂಬ ವಿಚಾರ ಬೆಳಕಿಗೆ ಬಂದ ನಂತರ ಹಿಮಾಚಲ ಪ್ರದೇಶ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಡೊನಾಲ್ಡ್ ಟ್ರಂಪ್ ಮತ್ತು ಅಮಿತಾಬ್ ಬಚ್ಚನ್ ಹೆಸರಿನಲ್ಲಿ ಸಿದ್ಧಪಡಿಸಿದ ಎಚ್‌ಪಿ -2563825 ಹಾಗೂ  ಎಚ್‌ಪಿ -2563287  ಸಂಖ್ಯೆಯ ಎರಡೂ ಇ-ಪಾಸ್ ಗಳು ಒಂದೇ ಮೊಬೈಲ್ ಸಂಖ್ಯೆ ಹಾಗೂ  ಆಧಾರ್ ಸಂಖ್ಯೆಯನ್ನು ಹೊಂದಿವೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಹಿಮಾಚಲ ಪ್ರದೇಶದ ಮಾಹಿತಿ ತಂತ್ರಜ್ಞಾನ ಇಲಾಖೆ ನೀಡಿದ ದೂರಿನ ಆಧಾರದ ಮೇಲೆ ಶಿಮ್ಲಾ ಪೂರ್ವ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ, ಇದರಲ್ಲಿ ಇ-ಪಾಸ್ ನೀಡುವ ಬಗ್ಗೆ ಸಾಮಾಜಿಕ ಮಾಧ್ಯಮ ಮತ್ತು ಸುದ್ದಿ ಚಾನೆಲ್‌ಗಳಲ್ಲಿ ತಪ್ಪು ಮಾಹಿತಿ ಹರಡುತ್ತಿದೆ ಎಂದು ಆರೋಪಿಸಲಾಗಿದೆ.

ಎಪ್ರಿಲ್ 26 ರಂದು ಹಿಮಾಚಲ ಪ್ರದೇಶ ಸರಕಾರ ಹೊರಡಿಸಿದ ಆದೇಶದ ಪ್ರಕಾರ, ರಾಜ್ಯವನ್ನು ಪ್ರವೇಶಿಸಲು ಬಯಸುವ ಎಲ್ಲಾ ಜನರು ಸ್ವತಃ ವೆಬ್‌ಸೈಟ್‌ನಲ್ಲಿ ನೋಂದಾಯಿಸಿಕೊಳ್ಳಬೇಕು., ಅಲ್ಲಿ ಅವರ ಆಗಮನದ ವಿವರಗಳನ್ನು ಕ್ವಾರಂಟೈನ್ ಅವಶ್ಯಕತೆ ಮತ್ತು ಸಂಪರ್ಕ ಪತ್ತೆಹಚ್ಚುವಿಕೆಯ ಉದ್ದೇಶಕ್ಕಾಗಿ ಸಂಬಂಧಪಟ್ಟ ಎಲ್ಲರೊಂದಿಗೆ ಹಂಚಿಕೊಳ್ಳಲಾಗುತ್ತದೆ. ಎಪ್ರಿಲ್ 27 ರಿಂದ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯಕ್ಕೆ ಪ್ರವೇಶಿಸಲು ಬಯಸುವವರಿಗೆ ಇ-ಪಾಸ್ ಗಳನ್ನು ಕಡ್ಡಾಯಗೊಳಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News