ಮೇ 11ರೊಳಗೆ ರಾಜ್ಯದ ಎಲ್ಲಾ ಜಿಲ್ಲಾ, ತಾಲೂಕು ಆಸ್ಪತ್ರೆಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಲು ಸುತ್ತೋಲೆ

Update: 2021-05-08 14:58 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ 8: ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳ ವಾರ್ಡ್, ಐಸಿಯುಗಳಲ್ಲಿ ಮೇ 11ರೊಳಗೆ ಸಿಸಿ ಕ್ಯಾಮರಾ ಅಳವಡಿಸುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

ಆಸ್ಪತ್ರೆಗಳಲ್ಲಿ ಇತ್ತೀಚೆಗೆ ಆಕ್ಸಿಜನ್ ಕಳವು, ಸಿಬ್ಬಂದಿ ನಿರ್ಲಕ್ಷ್ಯದ ಬಗ್ಗೆ ಅನೇಕ ಆರೋಪಗಳು ಕೇಳಿ ಬಂದಿತ್ತು. ಹೀಗಾಗಿ ಸಿಸಿ ಕ್ಯಾಮರಾ ಅಳವಡಿಕೆಗೆ ಆರೋಗ್ಯ ಇಲಾಖೆ ನಿರ್ದೇಶನ ನೀಡಿದ್ದು, ಸಿಸಿಟಿವಿ ಕ್ಯಾಮರಾ ಅಳವಡಿಸಲು ತಗಲುವ ವೆಚ್ಚವನ್ನು ಆರೋಗ್ಯ ರಕ್ಷಾ ಸಮಿತಿ ಅನುದಾನದಿಂದ ಅಥವಾ ಆಸ್ಪತ್ರೆಯಲ್ಲಿ ಲಭ್ಯವಿರುವ ಇತರ ಅನುದಾನದಿಂದ ಭರಿಸಿಕೊಳ್ಳಲು ಸೂಚಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News