ರಾಜ್ಯದಲ್ಲಿ ಮೇ 24ರವರೆಗೆ ಧಾರಾವಾಹಿ, ರಿಯಾಲಿಟಿ ಶೋಗಳ ಚಿತ್ರೀಕರಣ ಬಂದ್

Update: 2021-05-08 14:49 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ 8: ರಾಜ್ಯದಲ್ಲಿ ಕೊರೋನ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಲಾಲ್‌ಡೌನ್ ಮಾರ್ಗಸೂಚಿಯನ್ವಯ ಧಾರಾವಾಹಿಗಳ ಚಿತ್ರೀಕರಣವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ ಎಂದು ಟಿವಿ ಅಸೋಸಿಯೇಷನ್ ಅಧ್ಯಕ್ಷ ಎಸ್. ವಿ.ಶಿವಕುಮಾರ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೋವಿಡ್ ಸೋಂಕಿನಿಂದ ಕಿರುತೆರೆಯ ಸಾಕಷ್ಟು ಕಲಾವಿದರು, ತಂತ್ರಜ್ಞರನ್ನು ಕಳೆದುಕೊಂಡಿದ್ದೇವೆ. ಹೀಗಾಗಿ ಧಾರಾವಾಹಿಗಳು ಮತ್ತು ರಿಯಾಲಿಟಿ ಶೋಗಳ ಚಿತ್ರೀಕರಣವನ್ನು ಮೇ 10ರಿಂದ 24 ರವರೆಗೆ ಸ್ಥಗಿತಗೊಳ್ಳಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News