ರಾಮಜನ್ಮಭೂಮಿ ತೀರ್ಪು ನೀಡಿದ್ದ ಅಲಹಾಬಾದ್ ಹೈಕೋರ್ಟ್ ಮಾಜಿ ನ್ಯಾಯಾಧೀಶ ಧರಮ್ ವೀರ್ ಶರ್ಮಾ ನಿಧನ

Update: 2021-05-08 12:20 GMT

ಹೊಸದಿಲ್ಲಿ: ಅಲಹಾಬಾದ್ ಹೈಕೋರ್ಟ್ ನ ಮಾಜಿ ನ್ಯಾಯಾಧೀಶರಾದ ಜಸ್ಟಿಸ್ ಧರಮ್ ವೀರ್ ಶರ್ಮಾ ಅವರು ಶುಕ್ರವಾರ ದೀರ್ಘಕಾಲದ ಅಸೌಖ್ಯದಿಂದಾಗಿ ನಿಧನರಾಗಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು.

2010ರಲ್ಲಿ ನಿವೃತ್ತಿಯಾದ ಬಳಿಕ ಶರ್ಮಾ ಅವರು ತಮ್ಮ ಕುಟುಂಬದೊಂದಿಗೆ ಲಕ್ನೊಗೆ ಸ್ಥಳಾಂತರವಾಗಿದ್ದರು.

ಉತ್ತರಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಶರ್ಮಾ ಅವರ ನಿಧನಕ್ಕೆ ಟ್ವೀಟರ್ ಮೂಲಕ ಶೋಕ ವ್ಯಕ್ತಪಡಿಸಿದ್ದಾರೆ.

2010ರಲ್ಲಿ ಅಯೋಧ್ಯೆ ರಾಮಜನ್ಮಭೂಮಿಗೆ  ಸಂಬಂಧಿಸಿದ ತೀರ್ಪು ನೀಡಿದ ಅಲಹಾಬಾದ್ ಹೈಕೋರ್ಟ್  ನ ಮೂವರು ನ್ಯಾಯಾಧೀಶರ ವಿಶೇಷ ನ್ಯಾಯಪೀಠದಲ್ಲಿ  ಜಸ್ಟಿಸ್ ಧರಮ್ ವೀರ್ ಶರ್ಮಾ ಕೂಡ ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News