ಕೋವಿಡ್ ಸಂದಿಗ್ಧತೆಯಲ್ಲಿ ಸಿ.ಟಿ.ರವಿಯಿಂದ ಚುನಾವಣಾ ವಿಜಯೋತ್ಸವ: ಎಐಸಿಸಿ ಕಾರ್ಯದರ್ಶಿ ಸಂದೀಪ್ ಟೀಕೆ

Update: 2021-05-08 12:54 GMT

ಚಿಕ್ಕಮಗಳೂರು, ಮೇ 8: ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಆಸ್ಪತ್ರೆಗಳಲ್ಲಿ ಹಲವು ಸಮಸ್ಯೆಗಳು ಉಲ್ಭಣಗೊಂಡಿವೆ. ಇಂತಹ ಸಂದರ್ಭದಲ್ಲಿ ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸದೆ ತಮ್ಮ ಜವಾಬ್ದಾರಿ ಮರೆತು ಶಾಸಕ ಸಿ.ಟಿ ರವಿ ಚುನಾವಣೆಯ ವಿಜಯೋತ್ಸವದಲ್ಲಿ ಮುಳುಗಿದ್ದಾರೆ ಎಂದು ಎಐಸಿಸಿ ರಾಜ್ಯ ಕಾರ್ಯದರ್ಶಿ ಬಿ.ಎಂ ಸಂದೀಪ್ ಟೀಕಿಸಿದ್ದಾರೆ.

ಕ್ಷೇತ್ರದ ಜನರು ಆಸ್ಪತ್ರೆಗಳಲ್ಲಿ ಹಾಸಿಗೆ, ಆಮ್ಲಜನಕ, ವೆಂಟಿಲೇಟರ್ ಇಲ್ಲದೇ ನರಳಾಡುತ್ತಿದ್ದಾರೆ. ಜೊತೆಗೆ ಲಾಕ್‍ಡೌನ್ ಘೋಷಣೆಯಿಂದಾಗಿ ನಗರದಲ್ಲಿನ ವಾಸಿಗಳು ಹಳ್ಳಿಗಳತ್ತ ಬರುತ್ತಿದ್ದಾರೆ. ಇದರಿಂದಾಗಿ ಹಳ್ಳಿಗಳಲ್ಲೂ ಕೋವಿಡ್ ವ್ಯಾಪಿಸುವ ಆತಂಕ ಎದುರಾಗಿದೆ. ಇದಕ್ಕೆ ಯಾವುದೇ ಕ್ರಮ ಕೈಗೊಳ್ಳದೇ ಶಾಸಕ ಸಿ.ಟಿ.ರವಿ ಇದಕ್ಕೂ ತನಗೂ ಸಂಬಂಧವೇ ಇಲ್ಲ ಎಂಬಂತೆ ವಿಜಯೋತ್ಸವದಲ್ಲಿ ತೊಡಗಿದ್ದಾರೆ ಎಂದು ವ್ಯಂಗ್ಯವಾಡಿದರು.

ರಾಜ್ಯದ ಮುಖ್ಯಮಂತ್ರಿ ಕೋವಿಡ್ ನಿರ್ವಹಣೆಗೆ ಹಗಲು-ರಾತ್ರಿ ಶ್ರಮಿಸುತ್ತಿದ್ದಾರೆ. ಈ ಬಗ್ಗೆ ಸರಕಾರಕ್ಕೆ ಸೂಕ್ತ ಸಲಹೆ ನೀಡಲಾಗದೇ ಅನ್ಯ ರಾಜ್ಯಗಳಿಗೆ ತೆರಳಲು ಅವಕಾಶವಿಲ್ಲದಿದ್ದರೂ ಶಾಸಕ ಸಿ.ಟಿ.ರವಿ ಪಾಂಡಿಚೇರಿಗೆ ತೆರಳಿದ್ದಾರೆ. ರಾಜ್ಯದಲ್ಲಿ ಕೋವಿಡ್‍ನಿಂದಾಗಿ ಜನ ಚಿಕಿತ್ಸೆ ಸಿಗದೆ ಸಾವನ್ನಪ್ಪುತ್ತಿದ್ದಾರೆ, ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News