ಬೆಂಗಳೂರು: ಮೇ 10ರಿಂದ ನಿಷೇಧಾಜ್ಞೆ ಜಾರಿ

Update: 2021-05-08 16:21 GMT

ಬೆಂಗಳೂರು, ಮೇ 8: ಕೋವಿಡ್ ಹಿನ್ನೆಲೆ ರಾಜ್ಯ ರಾಜಧಾನಿ ಬೆಂಗಳೂರು ವ್ಯಾಪ್ತಿಯಲ್ಲಿ ಮೇ 10ರಿಂದ ಮೇ 24ರ ಬೆಳಗ್ಗೆ 6ಗಂಟೆಯವರೆಗೆ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ರಾಜ್ಯ ಸರಕಾರ ಕೊರೋನ ನಿಯಂತ್ರಣಕ್ಕಾಗಿ ಮಾರ್ಗಸೂಚಿ ಕ್ರಮಗಳನ್ನು ಬಿಡುಗಡೆ ಮಾಡಿದ್ದು, ಕರ್ನಾಟಕ ಸೇರಿದಂತೆ ಬೆಂಗಳೂರಿನಲ್ಲಿ ಕೊರೋನ ನಿಯಂತ್ರಣಕ್ಕಾಗಿ ಈ ಮಾರ್ಗಸೂಚಿ ಕ್ರಮಗಳ ಜಾರಿಗೆ ತಿಳಿಸಿರುತ್ತಾರೆ. ಈ ಸಂಬಂಧ ಮೇ 10ರ ಬೆಳಗ್ಗೆ 6 ಗಂಟೆಯಿಂದ ಮೇ 24ರ ಬೆಳಗ್ಗೆ 6 ಗಂಟೆಯವರೆಗೆ ರಾಜ್ಯ ಸರಕಾರ ಹೊರಡಿಸಿರುವಂತ ಕೊರೋನ ನಿಯಂತ್ರಣ ಮಾರ್ಗಸೂಚಿ ಜಾರಿಗೊಳಿಸಲಾಗಿರುತ್ತದೆ ಎಂದು ಹೇಳಿದ್ದಾರೆ.

ಬೆಂಗಳೂರು ನಗರದಲ್ಲಿ ರಾಜ್ಯ ಸರಕಾರದ ಮಾರ್ಗಸೂಚಿಯಂತೆ 1973ರ ಸಿಆರ್‍ಪಿಸಿ ಅಡಿಯ 144(1) ಅಡಿಯಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಈ ನಿಯಮವನ್ನು ಮೀರುವವರ ವಿರುದ್ಧ ಡಿಎಂಎ 2005ರ ಕಾಯ್ದೆಯ 51 ರಿಂದ 60ರ ಅಡಿಯಲ್ಲಿ ಹಾಗೂ ಐಪಿಸಿ 188 ಸೆಕ್ಷನ್, ಕೆಇಡಿಎ ಕಾಯ್ದೆ 2020ರ ಸೆಕ್ಷನ್ 4, 5 ಮತ್ತು 10ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News