ತಮಿಳುನಾಡಿಗೆ 450 ಆಮ್ಲಜನಕ ಸಾಂದ್ರಕಗಳನ್ನುದೇಣಿಗೆ ನೀಡಿದ ಚೆನ್ನೈ ಸೂಪರ್ ಕಿಂಗ್ಸ್

Update: 2021-05-08 17:38 GMT

ಚೆನ್ನೈ:  ಇಂಡಿಯನ್  ಪ್ರೀಮಿಯರ್ ಲೀಗ್ (ಐಪಿಎಲ್) ಫ್ರ್ಯಾಂಚೈಸಿ ಚೆನ್ನೈ ಸೂಪರ್ ಕಿಂಗ್ಸ್ ಶನಿವಾರ 450 ಆಮ್ಲಜನಕ ಸಾಂದ್ರಕಗಳನ್ನು ತಮಿಳುನಾಡು ಸರಕಾರಕ್ಕೆ ಹಸ್ತಾಂತರಿಸಿದೆ.  ಈ ಮೂಲಕ  ಕೋವಿಡ್ -19 ಸಾಂಕ್ರಾಮಿಕ ವಿರುದ್ಧದ ಹೋರಾಟದಲ್ಲಿತಮಿಳುನಾಡಿನೊಂದಿಗೆ ಕೈಜೋಡಿಸಿದೆ.

ಸಿಎಸ್ ಕೆ ನಿರ್ದೇಶಕ ಆರ್.ಶ್ರೀನಿವಾಸನ್ ಅವರು ಆಮ್ಲಜನಕ ಸಾಂದ್ರಕಗಳನ್ನು ರಾಜ್ಯದ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರಿಗೆ ಹಸ್ತಾಂತರಿಸಿದ್ದು, ತಮಿಳುನಾಡು ಕ್ರಿಕೆಟ್ ಸಂಘದ ಅಧ್ಯಕ್ಷ ರೂಪಾ ಗುರುನಾಥ್ ಉಪಸ್ಥಿತರಿದ್ದರು.

ಮೂರು ಬಾರಿ ಚಾಂಪಿಯನ್‌ ಆಗಿರುವ ಚೆನ್ನೈ ತಂಡ  ಆಕ್ಸಿಜನ್ ಸಾಂದ್ರಕಗಳನ್ನು ಸಂಗ್ರಹಿಸಲು ಕೋವಿಡ್ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿರುವ ಭೂಮಿಕಾ ಟ್ರಸ್ಟ್ ಎಂಬ ಎನ್‌ಜಿಒ ಜೊತೆ ಒಪ್ಪಂದ ಮಾಡಿಕೊಂಡಿದೆ. ಆಮ್ಲಜನಕ ಸಾಂದ್ರಕಗಳ ಮೊದಲ ರವಾನೆ ಬಂದಿದ್ದು, ಉಳಿದವು ಮುಂದಿನ ವಾರದ ಆರಂಭದಲ್ಲಿ ತಲುಪುವ ನಿರೀಕ್ಷೆಯಿದೆ.

ಸರಕಾರಿ ಆಸ್ಪತ್ರೆಗಳಲ್ಲಿ ಹಾಗೂ  ಗ್ರೇಟರ್ ಚೆನ್ನೈ ಕಾರ್ಪೊರೇಷನ್ (ಜಿಸಿಸಿ) ನಡೆಸುವ ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ರೋಗಿಗಳ ಅನುಕೂಲಕ್ಕಾಗಿ  ಆಮ್ಲಜನಕ ಸಾಂದ್ರಕಗಳನ್ನು ಬಳಸಲಾಗುತ್ತದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News