ಬೆಡ್ ಬ್ಲಾಕಿಂಗ್ ಪ್ರಕರಣ: ಖಾಸಗಿ ಆಸ್ಪತ್ರೆಗಳ ಸಿಬ್ಬಂದಿಯ ವಿಚಾರಣೆ
Update: 2021-05-09 20:57 IST
ಬೆಂಗಳೂರು, ಮೇ 9: ಬೆಡ್ ಬ್ಲಾಕಿಂಗ್ ಪ್ರಕರಣ ಸಂಬಂಧ ತನಿಖೆ ಮುಂದುವರೆಸಿರುವ ಸಿಸಿಬಿ ಪೊಲೀಸರು ಕೆಲಸ ಖಾಸಗಿ ಆಸ್ಪತ್ರೆಗಳ ಸಿಬ್ಬಂದಿಯನ್ನು ವಿಚಾರಣೆ ನಡೆಸಿದರು.
ಆರೋಗ್ಯ ಮಿತ್ರ ಸಿಬ್ಬಂದಿಯನ್ನೂ ವಿಚಾರಣೆಗೊಳಪಡಿಸಿದ್ದು, ಹಲವು ಮಾಹಿತಿ ಕಲೆಹಾಕಿದ್ದಾರೆ. ಸೋಮವಾರವೂ ಹಲವರನ್ನು ವಿಚಾರಣೆಗೊಳಪಡಿಸಲು ಸಿದ್ಧತೆ ನಡೆಸಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದ್ದಾರೆ.