ಪೂರ್ಣ ಪ್ರಮಾಣದ ಲಾಕ್‍ಡೌನ್‍ಗೆ ಅಧಿಕಾರವೇ ಇಲ್ಲ: ಸಚಿವ ಆನಂದ ಸಿಂಗ್
Update: 2021-05-09 23:09 IST
ಬಳ್ಳಾರಿ, ಮೇ 9: ಕೋವಿಡ್ ಸಂಬಂಧ ಸೋಮವಾರದಿಂದ ಸೆಮಿ ಲಾಕ್‍ಡೌನ್ ಮಾಡಲಾಗುತ್ತಿದೆ. ಆದರೆ ಪೂರ್ಣ ಪ್ರಮಾಣದ ಲಾಕ್‍ಡೌನ್ ಮಾಡಲು ನಮಗೆ ಅಧಿಕಾರ ಇಲ್ಲ ಎಂದು ಸಚಿವ ಆನಂದ ಸಿಂಗ್ ತಿಳಿಸಿದ್ದಾರೆ.
ರವಿವಾರ ಇಲ್ಲಿನ ಹರಪನಹಳ್ಳಿಯಲ್ಲಿ ಕೋವಿಡ್ ನಿಯಂತ್ರಣ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೇ 10ರಿಂದ ಸೆಮಿ ಲಾಕ್‍ಡೌನ್ ಮಾಡಲಾಗುತ್ತಿದೆ. ಪೂರ್ಣ ಪ್ರಮಾಣದ ಲಾಕ್‍ಡೌನ್ ಮಾಡಲು ನಮಗೆ ಅಧಿಕಾರ ಇಲ್ಲ. ನಾನು ಉಸ್ತುವಾರಿ ಸಚಿವನಾಗಿದರೂ, ಇಂತಹ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದರು.
ಸೋಮವಾರ ಪಕ್ಷಾತೀತವಾಗಿ ಎಲ್ಲ ಜನಪ್ರತಿನಿಧಿಗಳ ಸಭೆ ಕರೆಯಲಾಗಿದ್ದು, ಅಲ್ಲಿ ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದ ಅವರು, ಸರಕಾರ ಜಾರಿಗೊಳಿಸಿರುವ ನಿಯಮಗಳನ್ನು ಪಾಲನೆ ಮಾಡಿದರೆ ಮಾತ್ರ ಕೋವಿಡ್ ಮುಕ್ತ ವಾತಾವರಣ ನಿರ್ಮಿಸಲು ಸಾಧ್ಯ ಎಂದು ಹೇಳಿದರು.