ಕೋವಿಡ್ ಲಸಿಕೆ ಹಾಕಿಸಿಕೊಂಡ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ

Update: 2021-05-10 10:46 GMT

ಹೊಸದಿಲ್ಲಿ, ಮೇ 10: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ಸೋಮವಾರ ಕೋವಿಡ್-19 ಲಸಿಕೆಯ ಮೊದಲ ಡೋಸ್ ಹಾಕಿಸಿಕೊಂಡಿದ್ದಾರೆ.

ಈ ಕುರಿತು ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಬರೆದುಕೊಂಡಿರುವ ವಿರಾಟ್ ಕೊಹ್ಲಿ, ಆದಷ್ಟು ಬೇಗ ಲಸಿಕೆ ಹಾಕಿ, ಸುರಕ್ಷಿತವಾಗಿರಿ ಎಂದು ಮನವಿ ಮಾಡಿದ್ದಾರೆ. ಇದಲ್ಲದೇ ವಿರಾಟ್‌ ಕೊಹ್ಲಿ ಹಾಗೂ ಅನಿಷ್ಕಾ ಶರ್ಮ ಕೋವಿಡ್‌ ಪರಿಹಾರ ನಿಧಿಗೆ ದೇಣಿಗೆಯನ್ನೂ ಅವರು ಸಂಗ್ರಹಿಸುತ್ತಿದ್ದಾರೆ.
 
ಕಳೆದ ವಾರ ಭಾರತೀಯ ಕ್ರಿಕೆಟಿಗರಾದ ಉಮೇಶ್ ಯಾದವ್, ಅಜಿಂಕ್ಯ ರಹಾನೆ ಮತ್ತು ಶಿಖರ್ ಧವನ್ ಕೋವಿಡ್ ಲಸಿಕೆಯ ಮೊದಲ ಡೋಸ್ ಹಾಕಿಸಿಕೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News