ಸಾರ್ವಜನಿಕರ ಮೇಲೆ ಅನಗತ್ಯ ಬಲಪ್ರಯೋಗ ಮಾಡಬೇಡಿ: ಪೊಲೀಸರಿಗೆ ಕಮಿಷನರ್ ಕಮಲ್ ಪಂತ್ ಸೂಚನೆ

Update: 2021-05-10 12:55 GMT

ಬೆಂಗಳೂರು, ಮೇ 10: ನಿಷೇಧಾಜ್ಞೆ ಸಂದರ್ಭದಲ್ಲಿ ಸಾರ್ವಜನಿಕರ ಮೇಲೆ ಪೊಲೀಸ್ ಸಿಬ್ಬಂದಿ ಅನಗತ್ಯ ಬಲಪ್ರಯೋಗ ಮಾಡದಂತೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೂಚನೆ ನೀಡಿದ್ದಾರೆ.

ಸೋಮವಾರ ಈ ಕುರಿತು ಟ್ವೀಟ್ ಮಾಡಿರುವ ಅವರು, ಒಂದು ವೇಳೆ ಸಾರ್ವಜನಿಕರು ಲಾಕ್ ಡೌನ್ ಮಾರ್ಗಸೂಚಿ ಉಲ್ಲಂಘಿಸಿದ್ದು ಕಂಡುಬಂದಲ್ಲಿ ಮಾತ್ರ ಕಾನೂನಿನ ಅಡಿಯಲ್ಲಿ ಪೊಲೀಸ್ ಸಿಬ್ಬಂದಿ ಕ್ರಮ ಕೈಗೊಳ್ಳಬೇಕು ಹೊರತು ಬೇರೆ ಯಾವುದೇ ರೀತಿಯ ಬಲಪ್ರಯೋಗ ಮಾಡಬಾರದೆಂದು ಹೇಳಿದ್ದಾರೆ.

ಕೋವಿಡ್ ಹರಡುವುದನ್ನು ತಡೆಯಲು ದಯವಿಟ್ಟು ಸಹಕರಿಸಿ ಎಂದು ಮನವಿ ಮಾಡಿರುವ ಅವರು, ಜನಸಾಮಾನ್ಯರು ಮನೆಯಲ್ಲೇ ಇರಿ, ಸುರಕ್ಷಿತವಾಗಿ ಇರಿ. ಯಾವುದೇ ಕಾರಣಕ್ಕೂ ಅನಗತ್ಯವಾಗಿ ಓಡಾಟ ನಡೆಸಬೇಡಿ ಎಂದು ತಿಳಿಸಿದ್ದಾರೆ.

ಲಾಕ್‍ಡೌನ್ ಜಾರಿಯಾಗಿರುವ ಸಮಯದಲ್ಲಿ ಸರಕಾರದ ಮಾರ್ಗಸೂಚಿಯ ಪ್ರಕಾರ ಒಪ್ಪಿಗೆ ನೀಡಲಾದ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸಂಚಾರ ಅವಶ್ಯವಿದ್ದಲ್ಲಿ, ಅದರ ಕುರಿತಂತೆ ಡಿಸಿಪಿ ಸಂತೋಷ್ ಬಾಬು ಅವರನ್ನು ಸಂಪರ್ಕಿಸಬಹುದು (ಮೊಬೈಲ್ ಸಂಖ್ಯೆ 94808 01032, 080-22942354) ಎಂದು ಕಮಲ್ ಪಂತ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News