×
Ad

ಆಮ್ಲಜನಕ ಪೂರೈಕೆಗೆ ನಿರ್ಬಂಧ: ದ.ಕ.ಜಿಲ್ಲಾಧಿಕಾರಿ

Update: 2021-05-10 22:52 IST

ಮಂಗಳೂರು, ಮೇ 10: ಕೊರೋನ 2ನೆ ಅಲೆಯು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಮುಂದಿನ ಆದೇಶದವರೆಗೆ ಯಾವುದೇ ಸರಕಾರೇತರ ಸಂಘ ಸಂಸ್ಥೆಗಳಿಗೆ ಆಮ್ಲಜನಕ ಪೂರೈಕೆಯನ್ನು ನಿರ್ಬಂಧಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಅಲ್ಲದೆ ಸರಕಾರೇತರ ಸಂಘ ಸಂಸ್ಥೆಗಳು ತಮ್ಮ ಬಳಿಯಿರುವ ಆಮ್ಲಜನಕ ಸಿಲಿಂಡರ್‌ಗಳ ಬಗ್ಗೆ ಮಾಹಿತಿಯನ್ನು ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ ಹಾಗೀ ಸಹಾಯಕ ನೋಡಲ್ ಅಧಿಕಾರಿ ಬಿನೋಯ್ ಅವರಿಗೆ ನೀಡಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News