×
Ad

ವೆನ್ಲಾಕ್ ಆಸ್ಪತ್ರೆಯಲ್ಲಿ ಸೋಂಕಿತೆ ಮೃತ್ಯು; ತನಿಖಾ ವರದಿಗೆ ಸಚಿವ ಕೋಟ ಸೂಚನೆ

Update: 2021-05-10 22:53 IST

ಮಂಗಳೂರು, ಮೇ 10: ದ.ಕ.ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ರವಿವಾರ ಕೋವಿಡ್-19 ಸೋಂಕಿನಿಂದ ಮಹಿಳೆ ಮೃತಪಟ್ಟ ಬಗ್ಗೆ ತನಿಖಾ ವರದಿ ಸಲ್ಲಿಸುವಂತೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.

ಮೃತ ಮಹಿಳೆಯ ಕುಟುಂಬಸ್ಥರು ಆಸ್ಪತ್ರೆಯ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ವರ್ಗದ ಮೇಲೆ ಕರ್ತವ್ಯ ನಿರ್ಲಕ್ಷ್ಯದ ಆರೋಪ ಹೊರಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಲತಾಣಗಳಲ್ಲಿ ವೈರಲ್ ಆಗಿದ್ದು, ಈ ಹಿನ್ನೆಲೆಯಲ್ಲಿ ಪ್ರಕರಣದ ಸಮಗ್ರ ವರದಿಯನ್ನು ನೀಡುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.

ವರದಿಯಲ್ಲಿ ನಿರ್ಲಕ್ಷ್ಯ ವಹಿಸಿರುವ ಅಂಶ ಕಂಡುಬಂದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿರುತ್ತಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News