ರಾಜ್ಯಕ್ಕೆ ಆಗಮಿಸಿದ ‘ಆಕ್ಸಿಜನ್‌ ಎಕ್ಸ್‌ಪ್ರೆಸ್': ಕೇಂದ್ರ ನಾಯಕರಿಗೆ ಧನ್ಯವಾದ ಸಲ್ಲಿಸಿದ ಸಿಎಂ ಯಡಿಯೂರಪ್ಪ

Update: 2021-05-11 07:50 GMT

ಬೆಂಗಳೂರು, ಮೇ 11: 120 ಮೆಟ್ರಿಕ್‌ ಟನ್‌ ಆಮ್ಲಜನಕವನ್ನು ಹೊತ್ತ 6 ಕಂಟೇನರ್‌ಗಳ ‘ಆಕ್ಸಿಜನ್‌ ಎಕ್ಸ್‌ಪ್ರೆಸ್ ' ರಾಜ್ಯಕ್ಕೆ ಆಗಮಿಸಿದ್ದು, ಈ ಹಿನ್ನೆಲೆ ಕೇಂದ್ರ ನಾಯಕರಿಗೆ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಧನ್ಯವಾದ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ನಾಯಕರಾದ ಪಿಯೂಷ್‌ ಗೋಯಲ್‌, ಸದಾನಂದ ಗೌಡ ಹಾಗೂ ಪ್ರಹ್ಲಾದ್‌ ಜೋಷಿ ಅವರಿಗೆ ಟ್ವೀಟ್‌ ಮೂಲಕ ಯಡಿಯೂರಪ್ಪ ಧನ್ಯವಾದ ಹೇಳಿದ್ದಾರೆ.

''120 ಮೆಟ್ರಿಕ್‌ ಟನ್‌ ಆಮ್ಲಜನಕವನ್ನು ಹೊತ್ತ 6 ಕಂಟೈನರ್ ಗಳ ಆಕ್ಸಿಜನ್ ಎಕ್ಸ್‌ಪ್ರೆಸ್ ಕರ್ನಾಟಕ ತಲುಪಿದೆ. ಈ ಸಕಾಲಿಕ ನೆರವಿಗೆ ಸಹಕರಿಸಿದ ಕೇಂದ್ರ ಸಚಿವರುಗಳು ಹಾಗೂ ರಾಜ್ಯದ ಅಭಿವೃದ್ಧಿಗೆ ನಿರಂತರವಾಗಿ ಬೆಂಬಲ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು ಎಂದು ಯಡಿಯೂರಪ್ಪ ಟ್ವೀಟ್‌ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News