ಲಾಕ್‌ಡೌನ್: ಬೆಂಗಳೂರು ಹೊರತುಪಡಿಸಿ ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಆಹಾರ ವಿತರಣೆ

Update: 2021-05-11 09:37 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ 11: ಕೋವಿಡ್ ಹರಡುವಿಕೆಯನ್ನು ತಡೆಗಟ್ಟಲು ಮೇ 10 ರಿಂದ 24ರವರೆಗೆ ರಾಜ್ಯದಲ್ಲಿ ಲಾಕ್‌ಡೌನ್ ಘೋಷಿಸಿದ್ದು, ಇದರಿಂದ ಬಡವರಿಗೆ ಕೂಲಿಕಾರ್ಮಿಕರಿಗೆ ಆಹಾರ ಸಿಗದೇ ಕಷ್ಟಪಡುವಂತಾಗಿದೆ. ಹೀಗಾಗಿ ಲಾಕ್‌ಡೌನ್ ಅವಧಿಯಲ್ಲಿ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತವಾಗಿ ಆಹಾರವನ್ನು ಒದಗಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.

ಬಿಬಿಎಂಪಿ ಹೊರತು ಪಡಿಸಿ ಸ್ಥಳೀಯ ಸಂಸ್ಥೆಗಳಲ್ಲಿ ಚಾಲನೆಯಲ್ಲಿರುವ ಇಂದಿರಾ ಕ್ಯಾಂಟೀನ್ ನಲ್ಲಿ ಈ ವ್ಯವಸ್ಥೆ ಜಾರಿಯಲ್ಲಿರಲಿದ್ದು, ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿಯ ಊಟ ಉಚಿತವಾಗಿ ಸಿಗಲಿದೆ.

ಬಿಬಿಎಂಪಿ ವ್ಯಾಪ್ತಿ ಹೊರತುಪಡಿಸಿ ಇತರೆ ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿನ ಕೂಲಿ ಕಾರ್ಮಿಕರು, ವಲಸಿಗರು ಮತ್ತು ಇತರೇ ದುರ್ಬಲ ವರ್ಗದವರಿಗೆ ಅನಾನುಕೂಲವಾಗದಂತೆ ಈ ವ್ಯವಸ್ಥೆ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News