×
Ad

ಕಾರ್ಕಳ ಪೊಲೀಸರ ವಿರುದ್ಧ ಕ್ರಮಕ್ಕೆ ಎಸ್‌ಡಿಪಿಐ ಆಗ್ರಹ

Update: 2021-05-11 16:55 IST

ಉಡುಪಿ : ಲಾಕೌಡೌನ್ ನೆಪವೊಡ್ಡಿ ಕಾರ್ಕಳ ತಾಲೂಕಿನ ಬಜಗೋಳಿಯ ಮಹಿಳೆಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ದೊರೆಯದಂತೆ ತಡೆ ಹಿಡಿದು ಮಹಿಳೆಯ ಸಾವಿಗೆ ಕಾರಣರಾದ ಪೊಲೀಸರನ್ನು ತಕ್ಷಣ ಅಮಾನತು ಗೊಳಿಸಬೇಕು ಹಾಗೂ ಅವರ ವಿರುದ್ಧ ಕಠಿಣ ಕಾನೂನು ಕ್ರಮ ವನ್ನು ಕೈಗೊಳ್ಳ ಬೇಕು ಎಂದು ಎಸ್‌ಡಿಪಿಐ ಉಡುಪಿ ಜಿಲ್ಲಾ ಅಧ್ಯಕ್ಷ ಇಲಿಯಾಸ್ ಸಾಸ್ತಾನ ಆಗ್ರಹಿಸಿದ್ದಾರೆ.

ಮುಂಬರುವ ದಿನಗಳಲ್ಲಿ ಕೋವಿಡ್ ನಿರ್ಬಂಧದ ಹೆಸರಿನಲ್ಲಿ ಯಾವುದೇ ಕಾರಣಕ್ಕೂ ಇಂತಹ ಘಟನೆಗಳು ಮರುಕಳಿಸ ಬಾರದಂತೆ ಜಿಲ್ಲಾಡಳಿತವು ಕ್ರಮ ಕೈಗೊಳ್ಳಬೇಕು. ನಿಗದಿಪಡಿಸಿದ ಸಮಯದಲ್ಲಿ ಜನಸಾಮಾನ್ಯರಿಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಮತ್ತು ಇನ್ನಿತರ ತುರ್ತು ಸೇವೆಗಳಿಗೆ ತಮ್ಮ ಸ್ವಂತ ವಾಹನ ಬಳಸಲು ಅಥವಾ ಅಟೋ ರಿಕ್ಷಾಗಳಲ್ಲಿ ಸಂಚರಿಸಲು ಅವಕಾಶ ಮಾಡಿಕೊಡಬೇಕು. ಜನಜೀವನ ದುಸ್ತರವಾಗಿರುವ ಈ ಸಂದರ್ಭದಲ್ಲಿ ವಾಹನವನ್ನು ಮುಟ್ಟುಗೊಲು ಹಾಕುವುದು ಅಥವಾ ದಂಡ ವಿಧಿಸುವುದು ಮಾಡಬಾರದು ಎಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News