ಕಾಳಸಂತೆಯಲ್ಲಿ ರೆಮ್‍ಡೆಸಿವಿರ್ ಚುಚ್ಚುಮದ್ದು ಮಾರಾಟ: ಆ್ಯಂಬುಲೆನ್ಸ್ ಚಾಲಕ ಸೇರಿ ಇಬ್ಬರ ಬಂಧನ

Update: 2021-05-11 12:35 GMT

ಬೆಂಗಳೂರು, ಮೇ 11: ಕಾಳಸಂತೆಯಲ್ಲಿ ರೆಮ್‍ಡೆಸಿವಿರ್ ಚುಚ್ಚುಮದ್ದು ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಸಂತೋಷ್ ಹಾಗೂ ಸುನೀಲ್ ಎಂಬುವರು ಬಂಧಿತ ಆರೋಪಿಗಳೆಂದು ಪೊಲೀಸರು ಹೇಳಿದ್ದಾರೆ.

ಬಂಧಿತ ಇಬ್ಬರಿಂದಲೂ 8 ರೆಮ್‍ಡೆಸಿವಿರ್ ಜಪ್ತಿ ಮಾಡಲಾಗಿದ್ದು, ಈ ಪೈಕಿ ಸಂತೋಷ್ ಖಾಸಗಿ ಆಸ್ಪತ್ರೆ ಸಿಬ್ಬಂದಿಯಾಗಿದ್ದು, ಮತ್ತೋರ್ವ ಆ್ಯಂಬುಲೆನ್ಸ್ ಚಾಲಕನಾಗಿದ್ದಾನೆ ಎನ್ನುವ ಮಾಹಿತಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.

ಪ್ರಕರಣ ಸಂಬಂಧ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿ, ತನಿಖೆ ಕೈಗೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News