×
Ad

ಸಂಸದ ಪ್ರತಾಪ್ ಸಿಂಹಗೆ ಕೊರೋನ ಸೋಂಕು ದೃಢ

Update: 2021-05-11 20:05 IST

ಬೆಂಗಳೂರು, ಮೇ 11: ಮೈಸೂರು–ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ ಕೊರೋನ ಸೋಂಕು ದೃಢಪಟ್ಟಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ‘ಹಾವೇರಿ ಗೋಪಾಲಗೌಡ ಆಸ್ಪತ್ರೆಗೆ ಬೆಳಗ್ಗೆ ರೋಗಿಯೊಬ್ಬರ ಭೇಟಿಗೆ ತೆರಳಿದ್ದೆ. ಅಲ್ಲಿ ರ್‍ಯಾ‍ಪಿಡ್ ಆ್ಯಂಟಿಜೆನ್ ಪರೀಕ್ಷೆಗೆ ಒಳಪಟ್ಟಾಗ ವರದಿ ನೆಗೆಟಿವ್ ಬಂದಿತ್ತು. ಬಳಿಕ ಆರ್‌ಟಿಪಿಸಿಆರ್‌ ಪರೀಕ್ಷೆ ನಡೆಸಿದಾಗ ಸೋಂಕು ತಗಲಿರುವುದು ದೃಢಪಟ್ಟಿದೆ. ನನಗೆ ರೋಗದ ಯಾವುದೇ ಲಕ್ಷಣಗಳಿಲ್ಲ. ಆದರೂ ನನ್ನ ಸಂಪರ್ಕಕ್ಕೆ ಬಂದವರು ಪ್ರತ್ಯೇಕ ವಾಸದಲ್ಲಿರಿ, ಕ್ಷಮಿಸಿ’ ಎಂದು ಉಲ್ಲೇಖಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News