ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪ್ರಕರಣ

Update: 2021-05-11 14:44 GMT

ಶಂಕರನಾರಾಯಣ, ಮೇ 11: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿರುವ ಆರೋಪಿ ವಿರುದ್ಧ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.

ಆರೋಪಿಯನ್ನು ಬಿಹಾರ ಮೂಲದ ಕಾರ್ಮಿಕ ನಿರಂಜನ್ (30) ಎಂದು ಗುರುತಿಸಲಾಗಿದೆ. ಈ ಬಗ್ಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಬಂದ ದೂರಿನಂತೆ ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ಅಂಗನವಾಡಿ ಮೇಲ್ವಿಚಾರಕಿ ಭಾಗ್ಯವತಿ ಅಪ್ರಾಪ್ತ ಬಾಲಕಿ ಇರುವ ಕಾರ್ಮಿಕರ ಶೆಡ್ಗೆ ಭೇಟಿ ನೀಡಿ ಸಮಾಲೋಚನೆ ನಡೆಸಿದರು.

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಹಾಗೂ ಗರ್ಭಿಣಿ ಆಗಿರುವ ಬಗ್ಗೆ ಮಾಹಿತಿ ಪಡೆದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ನೀಡಿರುವ ದೂರಿನಂತೆ ಶಂಕರನಾರಾಯಣ ಠಾಣಾ ಉಪನಿರೀಕ್ಷಕ ಶ್ರೀಧರ್ ನಾಯ್ಕ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 ಸದ್ಯ ಬಾಲಕಿಯ ಪೋಷಕರು ಇಲ್ಲದೆ ಇರುವುದರಿಂದ ಅವಳ ರಕ್ಷಣೆ ಮತ್ತು ಪೋಷಣೆ ಹಿತದೃಷ್ಟಿಯಿಂದ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರೊನಾಲ್ಡ್ ಫುರ್ಟಾಡೋ ನಿರ್ದೇಶನದಂತೆ ನಿಟ್ಟೂರು ಬಾಲಕಿಯರ ಬಾಲಮಂದಿರದಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News