ಹೆಬ್ರಿಯಲ್ಲಿ ಆಕ್ಸಿಜನ್ ಘಟಕ ನಿರ್ಮಾಣಕ್ಕೆ ಚಾಲನೆ

Update: 2021-05-11 14:48 GMT

ಹೆಬ್ರಿ, ಮೇ 11: ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಆಕ್ಸಿಜನ್ ಘಟಕ ನಿರ್ಮಾಣ ಮಾಡುವ ಕಟ್ಟಡದ ಕಾಮಗಾರಿಗೆ ಮೇ 11ರಂದು ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಕ್ಸಿಜನ್ ಘಟಕ ನಿರ್ಮಿಸಲಾಗುತ್ತಿದೆ. ಕಾಮಗಾರಿ ಶೀಘ್ರವೇ ಪೂರ್ಣಗೊಳ್ಳಲಿದ್ದು, ಇದರಿಂದ 25 ಬೆಡ್‌ಗಳಿಗೆ ಆಮ್ಲಜನಕ ಪೂರೈಕೆ ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹೆಬ್ರಿ ತಾಪಂ ಅಧ್ಯಕ್ಷ ರಮೇಶ್ ಕುಮಾರ್, ಗ್ರಾಪಂ ಅಧ್ಯಕ್ಷೆ ಮಾಲತಿ, ಉಪಾಧ್ಯಕ್ಷ ಗಣೇಶ್ ಕುಮಾರ್ ಜರ್ವತ್ತು, ತಹಶೀಲ್ದಾರ್ ಪುರಂದರ್, ಹೆಬ್ರಿ ಪಂಚಾಯತ್ ಪಿಡಿಒ ಸದಾಶಿವ, ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದ ವೆದ್ಯಾಧಿಕಾರಿ ಡಾ.ಸಂತೋಷ್ ಕುಮಾರ್ ಬೈಲೂರು ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News