×
Ad

ಬೆಂಗಳೂರು ವ್ಯಾಪ್ತಿಯಲ್ಲಿ 20 ಸಾವಿರಕ್ಕೂ ಅಧಿಕ ವಾಹನಗಳ ಜಪ್ತಿ

Update: 2021-05-11 22:04 IST

ಬೆಂಗಳೂರು, ಮೇ 11: ಕೋವಿಡ್ ಸಂಬಂಧ ರಾಜ್ಯ ಸರಕಾರ ಜಾರಿಗೊಳಿಸಿರುವ ನಿಯಮಗಳನ್ನು ಉಲ್ಲಂಘಿಸಿ ಸಂಚಾರ ಮಾಡಿದ ಆರೋಪದಡಿ ಬೆಂಗಳೂರು ವ್ಯಾಪ್ತಿಯಲ್ಲಿ 20 ಸಾವಿರಕ್ಕೂ ಅಧಿಕ ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಕಳೆದ ಎರಡು ತಿಂಗಳಿನಿಂದ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಈವರೆಗೆ ಬೆಂಗಳೂರು ವ್ಯಾಪ್ತಿಯಲ್ಲಿ ಒಟ್ಟು 20,949 ವಾಹನಗಳನ್ನ ವಶಕ್ಕೆ ಪಡೆದಿದ್ದಾರೆ. ಇದರಲ್ಲಿ ದ್ವಿಚಕ್ರ ವಾಹನಗಳ ಸಂಖ್ಯೆಯೇ ಹೆಚ್ಚಿದೆ.

ಏಪ್ರಿಲ್ 27 ರಿಂದ ಮೇ 11 ರ ಬೆಳಗ್ಗೆ 6 ಗಂಟೆವರೆಗೂ ನಡೆದ ಕಾರ್ಯಾಚರಣೆಯಲ್ಲಿ ದ್ವಿಚಕ್ರ ವಾಹನಗಳು 19,089, ಮೂರು ಚಕ್ರದ ವಾಹನಗಳು 861, ನಾಲ್ಕು ಚಕ್ರದ ವಾಹನಗಳು 999 ವಾಹನಗಳಿವೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News