ಸಂಪೂರ್ಣ ಶುಲ್ಕ ಪಾವತಿಗೆ ಕಾಲೇಜಗಳ ಆಡಳಿತ ಮಂಡಳಿ ಒತ್ತಡಕ್ಕೆ ಎನ್‌ಎಸ್‌ಯುಐ ಖಂಡನೆ

Update: 2021-05-11 16:53 GMT

ಮಂಗಳೂರು, ಮೇ 11: ಕೊರೋನ ಸಂಕಷ್ಟ ಕಾಲದಲ್ಲೂ ಪದವೀಧರ ವಿದ್ಯಾರ್ಥಿಗಳು ಸಂಪೂರ್ಣ ಶುಲ್ಕ ಪಾವತಿಸುವಂತೆ ಒತ್ತಡ ಹೇರುತ್ತಿ ರುವ ಕಾಲೇಜಗಳ ಆಡಳಿತ ಮಂಡಳಿ ಕ್ರಮಕ್ಕೆ ಎನ್‌ಎಸ್ ಯುಐ ದ.ಕ.ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ತೀವ್ರ ಖಂಡಿಸಿದ್ದಾರೆ.

ರಾಜ್ಯ ಸರಕಾರ ಲಾಕ್‌ಡೌನ್ ಜಾರಿಗೊಳಿಸಿದ ಬಳಿಕ ಪದವೀಧರ ವಿದ್ಯಾರ್ಥಿಗಳ ಪ್ರಥಮ ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಸದ್ಯ ದ್ವಿತೀಯ ಸೆಮಿಸ್ಟರ್ ತರಗತಿಯನ್ನು ಆನ್‌ಲೈನ್ ಮೂಲಕ ಪ್ರಾರಂಭಿಸಲಾಗಿದೆ. ಈ ಮಧ್ಯೆ ವಿದ್ಯಾರ್ಥಿಗಳಿಗೆ ಇಡೀ ವರ್ಷದ ಶುಲ್ಕವನ್ನು ಪಾವತಿಸುವಂತೆ ಕಾಲೇಜು ಆಡಳಿತ ಮಂಡಳಿ ಕಟ್ಟುನಿಟ್ಟು ನಿಯಮ ಹೇರಿದೆ. ಅಲ್ಲದೆ ಈ ಕೂಡಲೇ ಶುಲ್ಕ ಪಾವತಿಸದ ವಿದ್ಯಾರ್ಥಿಗಳನ್ನು ಆನ್‌ಲೈನ್ ತರಗತಿಗೆ ಸೇರಿಸಲಾಗುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳು ಸಂಕಷ್ಟಕ್ಕೀಡಾಗಿದ್ದು, ಈ ಬಗ್ಗೆ ಸರಕಾರ ಗಮನಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಸಾಲಿನ ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಲ ಇನ್ನೂ ಕೂಡ ಸರಕಾರದಿಂದ ಲಭಿಸಿಲ್ಲ. ಇದನ್ನೇ ಅವಲಂಭಿಸಿ ಶಿಕ್ಷಣ ಮುಂದುವರಿಸಿರುವ ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಕಷ್ಟವನ್ನು ಅನುಭವಿಸುತ್ತಿದ್ದಾರೆ. ಈ ನಡುವೆ ಕಾಲೇಜು ಮಂಡಳಿಯ ನಿಯಮದಿಂದ ಬೇಸತ್ತಿದ್ದಾರೆ. ಆದ್ದರಿಂದ ರಾಜ್ಯ ಸರಕಾರ ಇಂತಹ ಆಡಳಿತ ಮಂಡಳಿಯು ವಿರುದ್ಧ ಕ್ರಮಕೈಗೊಳ್ಳಬೇಕು. ಶೀಘ್ರದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಬೇಕು ಎಂದು ಸವಾದ್ ಸುಳ್ಯ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News