ಡಿಸಿಎಂ ಲಕ್ಷ್ಮಣ ಸವದಿಯ ಸಹೋದರ ಪುತ್ರ ಕೋವಿಡ್ ಗೆ ಬಲಿ
Update: 2021-05-12 11:09 IST
ಬೆಳಗಾವಿ, ಮೇ 12: ರಾಜ್ಯ ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ಸಹೋದರ, ಕೃಷ್ಣ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಪರಪ್ಪ ಸವದಿ ಅವರ ಪುತ್ರ ವಿನೋದ್ ಸವದಿ(36) ಕೋವಿಡ್ ಸೋಂಕಿನಿಂದ ಇಂದು ಬೆಳಗಿನ ಜಾವ ಬೆಳಗಾವಿಯಲ್ಲಿ ಮೃತಪಟ್ಟಿದ್ದಾರೆ.
ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಬೆಳಗಾವಿಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಇಂದು ಬೆಳಗಿನ ಜಾವ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.