×
Ad

ಅಪೆಕ್ಸ್ ಬ್ಯಾಂಕಿನಿಂದ ಸಿಎಂ ಕೋವಿಡ್ ಪರಿಹಾರ ನಿಧಿಗೆ 5 ಕೋಟಿ ರೂ. ದೇಣಿಗೆ, 1 ಲಕ್ಷ N-95 ಮಾಸ್ಕ್ ಕೊಡುಗೆ

Update: 2021-05-12 11:18 IST

ಬೆಂಗಳೂರು ಮೇ 12: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ ವತಿಯಿಂದ ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿಗೆ 5 ಕೋಟಿ ರೂಪಾಯಿ ದೇಣಿಗೆಯ ಚೆಕ್ ನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬುಧವಾರ ಹಸ್ತಾಂತರಿಸಲಾಯಿತು.

ಇದೇ ವೇಳೆ 1 ಲಕ್ಷ N-95 ಮಾಸ್ಕ್ ಅನ್ನು ಸಹ ಮುಖ್ಯಮಂತ್ರಿಗೆ ಅಪೆಕ್ಸ್ ಬ್ಯಾಂಕ್ ವತಿಯಿಂದ ನೀಡಲಾಯಿತು.

ಈ ಸಂದರ್ಭ ಮಾತನಾಡಿದ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಕೋವಿಡ್ ಎರಡನೇ ಅಲೆ ಬಹಳ ಗಂಭೀರ ಪರಿಣಾಮ ಬೀರುತ್ತಿದೆ. ಇದರ ನಿರ್ವಹಣೆ ಸರ್ಕಾರಗಳಿಗೂ ಒಂದು ಸವಾಲಾಗಿ ಪರಿಣಮಿಸಿದೆ. ಇಂತಹ ಸಂದರ್ಭದಲ್ಲಿ ಸಹಕಾರ ಸಂಸ್ಥೆಗಳು ಸರ್ಕಾರದ ನೆರವಿಗೆ ಬರುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಅಪೆಕ್ಸ್ ಬ್ಯಾಂಕ್ ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿದಂತೆ ಇತರ ಸಂಘ ಸಂಸ್ಥೆಗಳು, ಖಾಸಗಿ ಕಂಪನಿಗಳು ಮುಂದಾಗಬೇಕಿದೆ. ಆ ಮೂಲಕ ಸಾರ್ವಜನಿಕ ಹಿತಾಸಕ್ತಿಗೆ ಇಂತಹ ಹಣ ಬಳಕೆಯಾಗಲು ಕಾರಣವಾಗಬೇಕಿದೆ ಎಂದು ಮನವಿ ಮಾಡಿದರು.

 ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ, ಶಾಸಕ ಬೆಳ್ಳಿ ಪ್ರಕಾಶ್, ಮಾರ್ಕೆಟಿಂಗ್ ಫೆಡರೇಶನ್ ಅಧ್ಯಕ್ಷ ರಾಜೇಂದ್ರ ಕುಮಾರ್, ಅಪೆಕ್ಸ್ ಬ್ಯಾಂಕ್ ಎಂ.ಡಿ. ಸಿ.ಎನ್.ದೇವರಾಜ್  ಹಾಗೂ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News