ಶೃಂಗೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಕೊರೋನಗೆ ಬಲಿ
Update: 2021-05-12 12:27 IST
ಚಿಕ್ಕಮಗಳೂರು, ಮೇ 12: ಕೋವಿಡ್-19 ಸೋಂಕಿನಿಂದ ಬಳಲುತ್ತಿದ್ದ ಶೃಂಗೇರಿ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಡಾ.ನಾಗರಾಜ್(51) ಚಿಕಿತ್ಸೆ ಇಂದು ಬೆಳಗ್ಗೆ ದಾವಣಗೆರೆಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ದಾವಣಗೆರೆಯ ಆಸ್ಪತ್ರೆಗೆ ದಾಖಲಾಗಿದ್ದ ಇವರು ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಮೂಲತಃ ಶಿವಮೊಗ್ಗ ಜಿಲ್ಲೆಯವರಾದ ಡಾ.ನಾಗರಾಜ್ ಕಳೆದೊಂದು ವರ್ಷದಿಂದ ಶೃಂಗೇರಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.