×
Ad

ಸೆಕೆಂಡ್‌ ಡೋಸ್‌ನವರಿಗೆ ಸಮಸ್ಯೆ ಇಲ್ಲ: ಡಿಸಿಎಂ ಡಾ. ಅಶ್ವತ್ಥನಾರಾಯಣ

Update: 2021-05-12 15:06 IST

ಬೆಂಗಳೂರು, ಮೇ 12: ಸದ್ಯ ದಿನಕ್ಕೆ 2.5 ಲಕ್ಷ ಕೋವಿಡ್ ತಡೆ ಡೋಸ್‌ ಲಸಿಕೆಯನ್ನು ಒದಗಿಸಲಾಗುತ್ತಿದೆ. ಹೀಗಾಗಿ ಎಲ್ಲಿಯೂ ಲಸಿಕೆ ಸಮಸ್ಯೆ ಇಲ್ಲ. ಮೊದಲು ಕೇವಲ 1 ಲಕ್ಷ ಡೋಸ್‌ ಮಾತ್ರ ನೀಡಲಾಗುತ್ತಿತ್ತು. ಸೆಕೆಂಡ್‌ ಡೋಸ್ ಪಡೆಯುತ್ತಿರುವವರಿಗೆ ಕೊರತೆ ಉಂಟಾಗುತ್ತಿಲ್ಲ. ಮೊದಲ ಡೋಸ್‌ ಪಡೆಯುತ್ತಿರುವರಿಗೆ ಮಾತ್ರ ಸಣ್ಣ ಪ್ರಮಾಣದಲ್ಲಿ ಸಮಸ್ಯೆ ಆಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೇ ದಿನ ಏಕಾಎಕಿ ಹೆಚ್ಚು ಜನ ಲಸಿಕೆ ಕೇಂದ್ರಕ್ಕೆ ನುಗ್ಗಬಾರದು. ಈ ಮುನ್ನ ಮೊದಲು ಬಂದರಿಗೆ ಲಸಿಕೆ ಕೊಡಲಾಗುತ್ತಿತ್ತು. ಇನ್ನು ಮುಂದೆ 45 ವರ್ಷ ಮೇಲ್ಪಟ್ಟವರು ಕೂಡ ಆನ್‌ಲೈನ್‌ ಮೂಲಕವೇ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News