×
Ad

ರಘುಪತಿ ಭಟ್ರೇ ಹಡಿಲುಭೂಮಿ ಬಿಟ್ಟು ಲಸಿಕಾ ಕೇಂದ್ರದ್ತ ಬನ್ನಿ: ರಮೇಶ್ ಕಾಂಚನ್ ಆಗ್ರಹ

Update: 2021-05-12 19:36 IST

ಉಡುಪಿ, ಮೇ 12: ಉಡುಪಿಯಲ್ಲಿ ಲಸಿಕೆ ನೀಡುವ ವ್ಯವಸ್ಥೆ ಸಂಪೂರ್ಣ ಗೊಂದಲದ ಗೂಡಾಗಿದ್ದು ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಕ್ಷೇತ್ರದ ಶಾಸಕ ರಘುಪತಿ ಭಟ್ ಹಡಿಲು ಭೂಮಿಯಲ್ಲಿ ಕೃಷಿ ಮಾಡುವ ಯೋಜನೆಯಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಶಾಸಕರು ತಕ್ಷಣ ತಮ್ಮ ಜವಾಬ್ದಾರಿಯನ್ನು ಅರಿತು ಹಡಿಲು ಭೂಮಿ ಯೋಜನೆಯನ್ನು ಸ್ವಲ್ಪಸಮಯ ಮುಂದೂಡಿ ಲಸಿಕಾ ಕೇಂದ್ರದತ್ತ ಗಮನ ಹರಿಸಿ ಜನರ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಉಡುಪಿ ನಗರಸಭಾ ವಿರೋಧ ಪಕ್ಷದ ನಾಯಕ ರಮೇಶ್ ಕಾಂಚನ್ ಆಗ್ರಹಿಸಿದ್ದಾರೆ.

ಉಡುಪಿಯ ಜನ ಇಂದು ಕೊರೋನಾ ಎರಡನೇ ಅಲೆಯಿಂದ ತೀವ್ರ ಸಂಕಷ್ಟದಲ್ಲಿ ಸಿಲುಕಿದ್ದು ರಘುಪತಿ ಭಟ್ ಮೇಲೆ ಕ್ಷೇತ್ರದ ಜನರು ಬಹಳಷ್ಟು ನಂಬಿಕೆ ಇಟ್ಟು ಗೆಲ್ಲಿಸಿದ್ದಾರೆ. ಆದರೆ ಉಡುಪಿಯಲ್ಲಿ ಆಸ್ಪತ್ರೆಗಳು ಈಗಾಗಲೇ ಕೋವಿಡ್ ರೋಗಿಗಳಿಂದ ತುಂಬಿತುಳುಕಿದ್ದು, ತೀವ್ರ ಅಸ್ವಸ್ಥಗೊಂಡವರಿಗೆ ವೆಂಟಿಲೇಟರ್ ಐಸಿಯು ದೊರೆಯುತ್ತಿಲ್ಲ. ಜನರು ಇಂತಹ ಸಂಕಷ್ಟಕರ ಪರಿಸ್ಥಿತಿಯಲ್ಲಿ ಬಹಳಷ್ಟು ಭಯಭೀತರಾಗಿದ್ದು ಕೋರೋನ ಲಸಿಕೆ ಪಡೆಯಲು ಹಾತೊರೆಯುತಿದ್ದಾರೆ. ಆದರೆ ಲಸಿಕಾ ಕೇಂದ್ರದಲ್ಲಿ ಸರಿಯಾಗಿ ಲಸಿಕೆ ದೊರೆ ಯುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.

18ರಿಂದ 44ವರ್ಷದವರಿಗೆ ಆನ್‌ಲೈನ್ ಬುಕ್ಕಿಂಗ್ ಬಹಳಷ್ಟು ಗೊಂದಲ ಕಾರಿಯಾಗಿದ್ದು, ವೆಬ್ಸೈಟ್ನಲ್ಲಿ ಅವಲೈಬಲ್ ಆಗುವುದಕ್ಕಿಂತ ಮುಂಚೆನೇ ವ್ಯಾಕ್ಸೀನ್ ಬುಕ್ ಆಗಿರುತ್ತದೆ. ಲಸಿಕಾ ಕೇಂದ್ರದಲ್ಲಿ ಸಾಮಾನ್ಯ ಜನರು ಕ್ಯೂನಲ್ಲಿ ನಿಂತು ಟೋಕನ್ ತೆಗೆದುಕೊಂಡು ಕಾಯುತಿದ್ದರೂ ಪ್ರಭಾವಿ ವ್ಯಕ್ತಿಗಳು ಯಾವುದೇ ಟೋಕನ್ ಇಲ್ಲದೆ ರಾಜಕೀಯ ಪ್ರಭಾವ ಬಳಸಿ ವ್ಯಾಕ್ಸೀನ್ ಪಡೆಯುತ್ತಿದ್ದಾರೆ ಎಂದು ಅವರು ಹೇಳಿಕೆಯಲ್ಲಿ ದೂರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News