ಉಡುಪಿ: ತಾಲೂಕು ಕೋವಿಡ್ ಕೇರ್ ಸೆಂಟರ್‌ಗೆ ನೋಡೆಲ್ ಅಧಿಕಾರಿಗಳ ನೇಮಕ
ಉಡುಪಿ, ಮೇ 12: ಜಿಲ್ಲೆಯಲ್ಲಿ ಕೋವಿಡ್ ಸೋಂಕು ಬಾಧಿತ ವ್ಯಕ್ತಿಗಳಿಗೆ ಆಸ್ಪತ್ರೆಯಲ್ಲಿ ಆಕ್ಷಿಜನ್‌ನ ಅವಶ್ಯಕತೆ ಇಲ್ಲದೇ ಹೋಂ ಐಸೋಲೇಷನ್ ಆಗಬೇಕಾದವರಿಗೆ, ಮನೆಯಲ್ಲಿ ಹೋಂ ಐಸೋಲೇಷನ್‌ಗೆ ಸಮಸ್ಯೆ ಇದ್ದಲ್ಲಿ ಅಂಥವರಿಗಾಗಿ ತಾಲೂಕು ಕೇಂದ್ರಗಳಲ್ಲಿ ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲಾಗಿದೆ.
ಕೋವಿಡ್ ಸೋಂಕು ಬಾಧಿತ ವ್ಯಕ್ತಿಗಳಿಗೆ ಈ ಕೋವಿಡ್ ಕೇರ್ ಸೆಂಟರ್ ನಲ್ಲಿ ಅವಶ್ಯ ಸೌಲಭ್ಯಗಳಾದ ಬೆಡ್ ವ್ಯವಸ್ಥೆ, ಊಟದ ವ್ಯವಸ್ಥೆ, ವಿದ್ಯುತ್ ವ್ಯವಸ್ಥೆ ಹಾಗೂ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸುವ ಸಲುವಾಗಿ ಈ ಕೆಳಗೆ ತಿಳಿಸಿರುವ ಅಧಿಕಾರಿಗಳನ್ನು ಕೋವಿಡ್ ಕೇರ್ ಸೆಂಟರ್‌ಗಳಿಗೆ ನೋಡೆಲ್ ಅಧಿಕಾರಿಗಳಾಗಿ ನೇಮಕ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.
ಕುಂದಾಪುರ ತಾಲೂಕಿನ ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿ ಯರ ವಿದ್ಯಾರ್ಥಿ ನಿಲಯದ ಕೋವಿಡ್ ಕೇರ್ ಸೆಂಟರ್‌ಗೆ ನೋಡೆಲ್ ಅಧಿಕಾರಿಯಾಗಿ ಕುಂದಾಪುರ ಭೂದಾಖಲೆಗಳ ಸಹಾಯಕ ನಿರ್ದೇಶಕ ಜಗದೀಶ್ (ಮೊ:9902197826), ಕಾರ್ಕಳ ತಾಲೂಕಿನ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ನಿಲಯ ಮಿಯಾರು ಇಲ್ಲಿನ ಕೋವಿಡ್ ಕೇರ್ ಸೆಂಟರ್‌ಗೆ ನೋಡೆಲ್ ಅಧಿಕಾರಿಯಾಗಿ ಕಾರ್ಕಳ ಅಕ್ಷರ ದಾಸೋಹ ಶಿಕ್ಷಣ ಇಲಾಖೆ ಸಹಾಯಕ ನಿದೇರ್ಶಕ ಭಾಸ್ಕರ ಟಿ (ಮೊ: 9449494011), ಹೆಬ್ರಿ ತಾಲೂಕಿನ ಹೆಬ್ರಿ ತಾಲೂಕು ಆರೋಗ್ಯ ಸಮುದಾಯ ಭವನ, ತಾಲೂಕು ಆಸ್ಪತ್ರೆ ಕೋವಿಡ್ ಕೇರ್ ಸೆಂಟರ್‌ಗೆ ನೋಡೆಲ್ ಅಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಾರ್ಕಳದ ಕ್ಷೇತ್ರ ಸಮನ್ವಯಾಧಿಕಾರಿ ಶ್ರೀಶೆಟ್ಟಿ ಪ್ರವೀಣ್ (ಮೊ:9448847958), ಉಡುಪಿ ತಾಲೂಕಿನ ಎಂಐಟಿ ಹಾಸ್ಟೆಲ್ ಮಣಿಪಾಲ ಕೋವಿಡ್ ಕೇರ್ ಸೆಂಟರ್‌ಗೆ ನೋಡೆಲ್ ಅಧಿಕಾರಿಯಾಗಿ ಭೂದಾಖಲೆಗಳ ಸಹಾಯಕ ನಿದೇರ್ಶಕ ತಿಪ್ಪೇರಾಯ ಕರೆಪ್ಪತೊರವಿ (ಮೊ:8277040047) ಇವರನ್ನು ನೋಡೆಲ್ ಅಧಿಕಾರಿಗಳಾಗಿ ನೇಮಕ ಮಾಡಲಾಗಿದೆ.
ನೋಡೆಲ್ ಅಧಿಕಾರಿಗಳು ತಮಗೆ ನೀಡಲಾದನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾವುದೇ ತೆರವಾದ ಲೋಪಕ್ಕೆ ಅವಕಾಶವಿಲ್ಲದಂತೆ ಕರ್ತವ್ಯ ನಿರ್ವಹಿಸಬೇಕು. ತಪ್ಪಿದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ವಿಪತ್ತು ನಿರ್ವಹಣಾ ಅಧಿನಿಯಮ 2005ರಡಿ ಹಾಗೂ ಎಪಿಡಮಿಕ್ ಡೀಸಿಸ್ ರೆಗ್ಯುಲೇಷನ್ ಆ್ಯಕ್ಟ್‌ನಂತೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.