×
Ad

ದ.ಕ. ಜಿಲ್ಲೆಯಲ್ಲಿ ಕೋವಿಡ್‌ಗೆ 2 ಬಲಿ; 1077 ಮಂದಿಗೆ ಸೋಂಕು ದೃಢ

Update: 2021-05-12 21:17 IST

ಮಂಗಳೂರು, ಮೇ 12: ದ.ಕ. ಜಿಲ್ಲೆಯಲ್ಲಿ ಬುಧವಾರ ಮತ್ತೆ 2 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 797ಕ್ಕೇರಿದೆ. ಅಲ್ಲದೆ ಬುಧವಾರ ಜಿಲ್ಲೆಯಲ್ಲಿ 1077 ಮಂದಿಗೆ ಕೊರೋನ ಸೋಂಕು ದೃಢಪಟ್ಟಿವೆ. 1,030 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಜಿಲ್ಲೆಯಲ್ಲಿ ಈವರಗೆ 7,90,958 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 7,31,415 ಮಂದಿಯ ವರದಿ ನೆಗೆಟಿವ್ ಬಂದಿದೆ. ಅಲ್ಲದೆ 59,543 ಮಂದಿ ಕೊರೋನ ಸೋಂಕಿಗೊಳಗಾಗಿದ್ದಾರೆ. ಈ ಪೈಕಿ 46,073 ಮಂದಿ ಗುಣಮುಖರಾಗಿದ್ದಾರೆ. ಸದ್ಯ 12,673 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಸ್ಕ್ ನಿಯಮ ಉಲ್ಲಂಸಿದ 53,870 ಮಂದಿಯಿಂದ 56,25,730 ರೂ. ದಂಡ ವಸೂಲು ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News