×
Ad

ಮಹಿಳೆಯರ ಪರ ಕಾಳಜಿ ಇದ್ದರೆ ಕೂಡಲೇ ಅನುದಾನ ಬಿಡುಗಡೆ ಮಾಡಿ: ಸಿದ್ದರಾಮಯ್ಯ

Update: 2021-05-12 21:32 IST

ಬೆಂಗಳೂರು, ಮೇ 12: `ಮುಖ್ಯಮಂತ್ರಿ ಯಡಿಯೂರಪ್ಪರ ಮಹಿಳಾ ಪರ ಬಜೆಟ್ ಎಂಬುದು ಬರೀ ಬಾಯಿಮಾತಿಗಷ್ಟೇ ಸೀಮಿತವೇ? ನಾಡಿನ ಮಹಿಳೆಯರ ಮೇಲೆ ರಾಜ್ಯ ಬಿಜೆಪಿ ಸರಕಾರಕ್ಕೆ ನೈಜ ಕಾಳಜಿ ಇದ್ದರೆ ಕೂಡಲೇ 71 ಕೇಂದ್ರಗಳು ಕಾರ್ಯನಿರ್ವಹಿಸಲು ಅಗತ್ಯವಿರುವ ಅನುದಾನ ಬಿಡುಗಡೆ ಮಾಡಬೇಕು' ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಬುಧವಾರ ಸರಣಿ ಟ್ವೀಟ್ ಮಾಡಿರುವ ಅವರು, `ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಸಮಾಲೋಚನೆ ಸೇರಿದಂತೆ ವಿವಿಧ ರೀತಿಯ ನೆರವು ನೀಡುವ ಮೂಲಕ ಅವರ ಬಾಳಲ್ಲಿ ಭರವಸೆ ಮೂಡಿಸುತ್ತಿದ್ದ ಸಾಂತ್ವನ ಕೇಂದ್ರಗಳನ್ನು ಆರ್ಥಿಕ ಕೊರತೆಯ ನೆಪವೊಡ್ಡಿ ಸ್ಥಗಿತಗೊಳಿಸಲು ಹೊರಟಿರುವ ರಾಜ್ಯ ಬಿಜೆಪಿ ಸರಕಾರದ ಮಹಿಳಾ ವಿರೋಧಿ ಕ್ರಮವನ್ನು ಖಂಡಿಸುತ್ತೇನೆ' ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News