ಕೋವಿಡ್ ಮಾರ್ಗಸೂಚಿ ಉಲ್ಲಂಘನೆ: ವಾಹನಗಳನ್ನು ತಡೆದು ಪರಿಶೀಲನೆ
Update: 2021-05-12 22:17 IST
ಮಂಗಳೂರು, ಮೇ 12: ಕೊರೋನ ಮಾರ್ಗಸೂಚಿ ಪಾಲನೆ ಮಾಡದೆ ಮಿತಿಗಿಂತ ಹೆಚ್ಚು ಮಂದಿ ಪ್ರಯಾಣಿಕರನ್ನು ವಾಹನಗಳಲ್ಲಿ ಕೊಂಡೊಯ್ದ ಹಿನ್ನೆಲೆಯಲ್ಲಿ ಮನಪಾ ಆರೋಗ್ಯ ಅಧಿಕಾರಿಗಳು ವಾಹನಗಳನ್ನು ತಡೆದು ಎಚ್ಚರಿಕೆ ನೀಡಿದ ಘಟನೆ ಬುಧವಾರ ನಗರದಲ್ಲಿ ಸಂಭವಿಸಿದೆ.
ಎರಡು ಖಾಸಗಿ ಮೆಡಿಕಲ್ ಕಾಲೇಜು ಹಾಗೂ ವೆನ್ಲಾಕ್ ಆಸ್ಪತ್ರೆಯ ಸಿಬ್ಬಂದಿಯನ್ನು ಒಂದು ಬಸ್ ಹಾಗೂ ಎರಡು ಇತರ ವಾಹನಗಳಲ್ಲಿ ಕರೆದೊಯ್ಯಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ತಡೆದು ಪರಿಶೀಲಿಸಿದ್ದಾರೆ ಎಂದು ತಿಳಿದು ಬಂದಿದೆ.