ಮುಷ್ಕರದಲ್ಲಿ ಪಾಲ್ಗೊಂಡಿದ್ದ ಸಾರಿಗೆ ನೌಕರರ ಅಮಾನತು ರದ್ದು: ಹೈಕೋರ್ಟ್ ಗೆ ಹೇಳಿಕೆ

Update: 2021-05-12 17:36 GMT

ಬೆಂಗಳೂರು, ಮೇ 12: ಸಾರಿಗೆ ನೌಕರರ ಬಹುತೇಕ ಅಮಾನತು ರದ್ದುಪಡಿಸಲಾಗಿದೆ ಹಾಗೂ ಈಗಿರುವ ನಿಯಮದಂತೆ ವೇತನ ಹೆಚ್ಚಳಕ್ಕೆ ಸಮ್ಮತಿಸಲಾಗಿದೆ ಎಂದು ಹೈಕೋರ್ಟ್‍ಗೆ ಸಾರಿಗೆ ನಿಗಮದ ಪರ ವಕೀಲರು ಮಾಹಿತಿ ನೀಡಿದರು.

ಈ ಮಾಹಿತಿಯನ್ನು ಲಿಖಿತ ರೂಪದಲ್ಲಿ ನೀಡಲು ಸಾರಿಗೆ ನಿಗಮಕ್ಕೆ ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಮೇ 26ಕ್ಕೆ ಮುಂದೂಡಿತು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಮುಷ್ಕರ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.     

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯದಲ್ಲಿ ಈಚೆಗೆ ಸಾರಿಗೆ ನಿಗಮಗಳ ನೌಕರರು ನಡೆಸಿದ್ದ ಮುಷ್ಕರದಿಂದ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಸದ್ಯದ ಆರ್ಥಿಕ ಪರಿಸ್ಥಿತಿಯಲ್ಲಿ ನೌಕರರ ಬೇಡಿಕೆ ಈಡೇರಿಸಲು ಆಗುವುದಿಲ್ಲ ಎಂದು ಹೇಳಿದ್ದ ರಾಜ್ಯ ಸರಕಾರ ಮುಷ್ಕರ ನಿರತ ಹಲವು ನೌಕರರನ್ನು ಅಮಾನತು, ವಜಾ ಮಾಡಿತ್ತು. ನಂತರದ ದಿನಗಳಲ್ಲಿ ಹೈಕೋರ್ಟ್ ಆದೇಶಕ್ಕೆ ತಲೆಬಾಗಿ ನೌಕರರು ಕೆಲಸಕ್ಕೆ ಹಾಜರಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News