ಮಂಡ್ಯ: ಕೋವಿಡ್ ಸೆಂಟರ್ ನಲ್ಲಿ ಮಹಿಳೆ ಆತ್ಮಹತ್ಯೆ
Update: 2021-05-13 13:07 IST
ಮಂಡ್ಯ, ಮೇ.13: ಮದ್ದೂರು ಸಾರ್ವಜನಿಕ ಆಸ್ಪತ್ರೆಯ ಕೋವಿಡ್ ಕೇರ್ ಸೆಂಟರ್ ನ ಶೌಚಾಲಯದಲ್ಲಿ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಮುಂಜಾನೆ ನಡೆದಿದೆ.
ಮಂಡ್ಯ ತಾಲೂಕು ಬೇಲೂರು ಗ್ರಾಮದ ಗೌರಮ್ಮ ಆತ್ಮಹತ್ಯೆ ಮಾಡಿಕೊಂಡವರು.
ಕೋವಿಡ್ ಪಾಸಿಟಿವ್ ಬಂದಿದ್ದ ಗೌರಮ್ಮನನ್ನು ಎರಡ ದಿನಗಳ ಹಿಂದೆ ಮದ್ದೂರು ಆಸ್ಪತ್ರೆಯ ಕೋವಿಡ್ ಕೇರ್ ಸೆಂಟರ್ ಗೆ ಸೇರಿಸಲಾಗಿತ್ತು.
ಆತ್ಮಹತ್ಯೆಗೆ ಮುನ್ನ ಆಕೆ ಯಾರ ಜತೆಯಲ್ಲೋ ದೂರವಾಣಿಯಲ್ಲಿ ಮಾತನಾಡುತ್ತಾ ಜಗಳವಾಡುತ್ತಿದ್ದರು ಎನ್ನಲಾಗಿದೆ. ಮದ್ದೂರು ಪೊಲೀಸರು ತನಿಖೆ ಕೈಗೊಂಡಿದ್ದಾರೆ.