ಗುಂಡ್ಲುಪೇಟೆ: ಕೋವಿಡ್ ಸೋಂಕಿತ ಮಹಿಳೆ ಸಾವು; ಸಂಬಂಧಿಕರಿಂದ ಆಸ್ಪತ್ರೆಯಲ್ಲಿ ದಾಂಧಲೆ

Update: 2021-05-13 15:39 GMT

ಚಾಮರಾಜನಗರ, ಮೇ 13: ಸೋಂಕಿತ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದ್ದು, ರೊಚ್ಚಿಗೆದ್ದ ಸಂಬಂಧಿಕರು ಆಸ್ಪತ್ರೆಯಲ್ಲಿನ ಸಿಬ್ಬಂದಿ ಮೇಲೆ ಆಕ್ಸಿಜನ್ ಸಿಲಿಂಡರ್ ನಿಂದ ಹಲ್ಲೆಗೆ ಮುಂದಾಗಿ ಕಿಟಕಿ ಬಾಗಿಲು ದ್ವಂಸ ಮಾಡಿದ ಘಟನೆ ಗುಂಡ್ಲುಪೇಟಯಲ್ಲಿ ನಡೆದಿದೆ.

ಗುಂಡ್ಲುಪೇಟೆ ತಾಲೂಕು ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತ ಮಹಿಳೆ ಸಾವನ್ನಪ್ಪಿದ್ದರು. ಇದರಿಂದ ರೊಚ್ಚಿಗೆದ್ದ ಮೃತ ಮಹಿಳೆಯ ಸಂಬಂಧಿಕರು ಆಸ್ಪತ್ರೆಯಲ್ಲಿನ ಸಿಬ್ಬಂದಿ ಮೇಲೆ ಆಕ್ಸಿಜನ್ ಸಿಲಿಂಡರ್ ನಿಂದ ಹಲ್ಲೆಗೆ ಮುಂದಾದರು ಎನ್ನಲಾಗಿದೆ. ಬಳಿಕ ಆಸ್ಪತ್ರೆಯ ಕಿಟಕಿ ಮತ್ತು ಬಾಗಿಲು ಜಖಂಗೊಳಿಸಿದ್ದಾರೆ.

ದಿಢೀರ್ ನಡೆದ ಘಟನೆಯಿಂದ ಕಂಗಲಾದ ಆಸ್ಪತ್ರೆಯಲ್ಲಿನ ಸಿಬ್ಬಂದಿ ಆತಂಕದಿಂದಿದ್ದು, ಕೆಲ ಹೊತ್ತು ಆಸ್ಪತ್ರೆಯಲ್ಲಿ ಕೆಲಸ ಮಾಡದೇ ಬಾಕಿಯಾದರು. ಘಟನೆಗೆ ಸಂಬಂಧಿಸಿದಂತೆ ಮೃತ ಮಹಿಳೆಯ ಸಂಬಂಧಿ ಗಿರೀಶ್ ನನ್ನು ಗುಂಡ್ಲುಪೇಟೆ ಪೊಲೀಸರು ಬಂಧಿಸಿದರು. 

ಆಸ್ಪತ್ರೆಗೆ ಗುಂಡ್ಲುಪೇಟೆ ತಹಶೀಲ್ದಾರ್ ರವಿಶಂಕರ್, ಸರ್ಕಲ್ ಇನ್ಸ್ ಪೆಕ್ಟರ್ ಮಹದೇವಸ್ವಾಮಿ, ಸಬ್ ಇನ್ಸ್ ಪೆಕ್ಟರ್ ರಾಜೇಂದ್ರ ರವರು ಆಗಮಿಸಿ, ಪರಿಸ್ಥಿತಿಯನ್ನು ತಿಳಿಗೊಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News