×
Ad

ಉಡುಪಿ ಜಿಲ್ಲೆಯಲ್ಲಿ 18-44ರ ಹರೆಯದ 586 ಮಂದಿಗೆ ಲಸಿಕೆ

Update: 2021-05-13 22:01 IST

ಉಡುಪಿ, ಮೇ 13: ಜಿಲ್ಲೆಯ ನಾಲ್ಕು ಲಸಿಕಾ ಕೇಂದ್ರಗಳಲ್ಲಿ 18ರಿಂದ 44 ವರ್ಷ ಪ್ರಾಯದೊಳಗಿನವರಿಗೆ ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಗುರುವಾರ 586 ಮಂದಿಗೆ ಕೋವಿಡ್ ಲಸಿಕೆ ಕೋವಿಶೀಲ್ಡ್ ನೀಡಲಾಯಿತು. ಈ ಮೂಲಕ ಮೂರು ದಿನಗಳಲ್ಲಿ ಒಟ್ಟು 2041ಮಂದಿಗೆ ಲಸಿಕೆಯನ್ನು ನೀಡಿದಂತಾಗಿದೆ ಎಂದು ಡಿಎಚ್‌ಓ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

45 ವರ್ಷ ಮೇಲಿನವರಲ್ಲಿ ಇಂದು ಆರು ಮಂದಿ ಮೊದಲ ಡೋಸ್‌ನ್ನು ಪಡೆದರೆ, 194 ಮಂದಿ ಎರಡನೇ ಡೋಸ್‌ನ್ನು ಪಡೆದುಕೊಂಡಿದ್ದಾರೆ. 42 ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ 27 ಮಂದಿ ಕೊರೋನ ಮುಂಚೂಣಿ ಕಾರ್ಯಕರ್ತರು ಸಹ ಇಂದು ಲಸಿಕೆಯನ್ನು ಪಡೆದಿದ್ದಾರೆ.

ಒಟ್ಟಾರೆಯಾಗಿ ಜಿಲ್ಲೆಯಲ್ಲಿಂದು 604 ಮಂದಿ ಮೊದಲ ಡೋಸ್‌ನ್ನು, 251 ಮಂದಿ ಎರಡನೇ ಡೋಸ್ ಪಡೆದಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 1,97,075 ಮಂದಿ ಲಸಿಕೆಯ ಮೊದಲ ಡೋಸ್‌ನ್ನು ಪಡೆದಿದ್ದರೆ, 61,016 ಮಂದಿ ಎರಡನೇ ಡೋಸ್‌ನ್ನು ಸ್ವೀಕರಿಸಿದ್ದಾರೆ ಎಂದು ಡಾ.ಸೂಡ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News