ಚಾಮರಾಜನಗರ ಆಸ್ಪತ್ರೆ ದುರಂತಕ್ಕೆ ಆಮ್ಲಜನಕ ಕೊರತೆಯೇ ಕಾರಣ: ಹೈಕೋರ್ಟ್ ಗೆ ತಜ್ಞರ ಸಮಿತಿ ವರದಿ

Update: 2021-05-13 18:19 GMT

ಚಾಮರಾಜನಗರ, ಮೇ 13: ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಇತ್ತೀಚಿಗೆ ಸಂಭವಿಸಿದ ದುರಂತಕ್ಕೆ ಆಮ್ಲಜನಕ ಕೊರತೆಯೇ ಕಾರಣ ಎಂದು ಹೈಕೋರ್ಟ್‌ ನೇಮಿಸಿದ್ದ ಮೂವರು ಸದಸ್ಯರ ಸಮಿತಿ ವರದಿ ಸಲ್ಲಿಸಿದೆ.

ಮೇ 2ರಂದು ರಾತ್ರಿ 10.30ರ ವೇಳೆ ‌ಆಸ್ಪತ್ರೆಯಲ್ಲಿ ಆಮ್ಲಜನಕವೇ ಲಭ್ಯವಿರಲಿಲ್ಲ’ ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಎನ್.ವೇಣುಗೋಪಾಲಗೌಡ ನೇತೃತ್ವದ ಕಾನೂನು ಸೇವೆಗಳ ಪ್ರಾಧಿಕಾರದ ಸಮಿತಿ ಅಭಿಪ್ರಾಯಪಟ್ಟಿದೆ. ಮೃತಪಟ್ಟವರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಸಮಿತಿ ಶಿಫಾರಸು ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರ ವಿಶೇಷ ವಿಭಾಗದ ಪೀಠದ ಮುಂದೆ ಬುಧವಾರ ಸಲ್ಲಿಸಲಾದ ವರದಿಯಲ್ಲಿ ಈ ವಿಷಯ ತಿಳಿಸಲಾಗಿದೆ. ಮೇ 2 ರಂದು ಚಾಮರಾಜನಗರ ಜಿಲ್ಲಾಧಿಕಾರಿ ನಡೆಸಿದ ಸಭೆಯಲ್ಲಿ ಆಮ್ಲಜನಕರ ಕೊರತೆ ಬಗ್ಗೆ ಪ್ರಸ್ತಾವ ಮಾಡಿರಲಿಲ್ಲ, ಆಸ್ಪತ್ರೆಯ ನೋಡಲ್ ಅಧಿಕಾರಿಯೂ ಮೈಸೂರಿನಿಂದ ಸರಬರಾಜು ಆಗುವ ಸಮಸ್ಯೆ ಬಗ್ಗೆ ಮಾತನಾಡಿರಲಿಲ್ಲ ಎಂದು ಸಮಿತಿ ತಿಳಿಸಿದೆ. ಆಸ್ಪತ್ರೆಯ ಆಡಳಿತ ಮಂಡಳಿ ಜಾಗರೂಕವಾಗಿದಿದ್ದರೆ ಸಮಯೋಚಿತವಾಗಿ ಆಮ್ಲಜನಕ ಸಿಲಿಂಡರ್ ಪೂರೈಸಿದ್ದರೆ ಅಮೂಲ್ಯ ಜೀವಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇರಲಿಲ್ಲ ಎಂದು ವರದಿಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News