×
Ad

ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 13 ಮಂದಿ ಸಾವು

Update: 2021-05-14 11:07 IST

ಚಾಮರಾಜನಗರ, ಮೇ 14: ಕೋವಿಡ್ ಆಸ್ಪತ್ರೆಯಲ್ಲಿ ಕೊರೋನ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಗುರುವಾರ ಬೆಳಗ್ಗೆ 9 ಗಂಟೆಯಿಂದ ಶುಕ್ರವಾರ ಬೆಳಗ್ಗೆ 9 ಗಂಟೆಯ ತನಕ  13  ಮಂದಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.

ಚಾಮರಾಜನಗರ ತಾಲೂಕಿನ 9 ಮಂದಿ, ಕೊಳ್ಳೇಗಾಲ ಹಾಗೂ ಯಳಂದೂರು ತಾಲೂಕಿನ ತಲಾ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಚಾಮರಾಜನಗರ ಕೋವಿಡ್ ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಗುರುವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 6ರ ತನಕ 6 ಮಂದಿ ಸಾವನ್ನಪ್ಪಿದ್ದರೆ, ಸಂಜೆ 6ರಿಂದ ಶುಕ್ರವಾರ ಬೆಳಗ್ಗೆ 9 ಗಂಟೆಯ ತನಕ ಮತ್ತೆ 7 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಈ ಪೈಕಿ 3 ಮಂದಿ ಕೋವಿಡ್ ಸೋಂಕಿತರಾದರೆ, 10 ಮಂದಿ ಕೋವಿಡ್ ಸೋಂಕಿನ ಲಕ್ಷಣಗಳನ್ನು ಹೊಂದಿದ್ದರು ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News