ಲಾಠಿಯಿಂದ ಹೊಡೆದ ಆರೋಪ: ಕಲ್ಲಡ್ಕದಲ್ಲಿ ಪೊಲೀಸರ ಜೊತೆ ವಾಗ್ವಾದ
Update: 2021-05-14 11:50 IST
ಬಂಟ್ವಾಳ, ಮೇ 14: ತಾಲೂಕು ಪಂಚಾಯತ್ ಸದಸ್ಯರೊಬ್ಬರಿಗೆ ಎಎಸ್ಸೈ ಒಬ್ಬರು ಲಾಠಿಯಿಂದ ಹೊಡೆದಿದ್ದಾರೆ ಎಂದು ಆರೋಪಿಸಿ ನಾಗರಿಕರು ಪೊಲೀಸರ ಜೊತೆ ವಾಗ್ವಾದ ನಡೆಸಿದ ಘಟನೆ ಶುಕ್ರವಾರ ಬೆಳಗ್ಗೆ ಕಲ್ಲಡ್ಕದಲ್ಲಿ ನಡೆದಿದೆ.
ಲಾಕ್ ಡೌನ್ ನಿಯಮಾವಳಿಯಂತೆ ಬೆಳಗ್ಗೆ 9 ಗಂಟೆಯ ಬಳಿಕ ಕಲ್ಲಡ್ಕದಲ್ಲಿ ಅಂಗಡಿಗಳನ್ನು ಮುಚ್ಚುವಂತೆ ಪೋಲೀಸರು ಸೂಚಿಸುತ್ತಿದ್ದರು. ಈ ವೇಳೆ ಕಾರು ನಿಲ್ಲಿಸಿ ಮೆಡಿಕಲ್ ಶಾಪ್ ಗೆ ಬರುತ್ತಿದ್ದ ಸ್ಥಳೀಯ ತಾಲೂಕು ಪಂಚಾಯತ್ ಸದಸ್ಯಗೆ ಬಂಟ್ವಾಳ ನಗರ ಠಾಣೆಯ ಎಎಸ್ಸೈ ಒಬ್ಬರು ಲಾಠಿಯಿಂದ ಹೊಡೆದಿದ್ದಾರೆ ಎನ್ನಲಾಗಿದೆ.
ಅಗತ್ಯ ಸಾಮಗ್ರಿಗಳ ಖರೀದಿಗೆ ಬಂದವರ ಮೇಲೆ ಪೊಲೀಸರು ಲಾಠಿ ಬೀಸುತ್ತಿದ್ದಾರೆ ಎಂದು ತಾಲೂಕು ಪಂಚಾಯತ್ ಸದಸ್ಯ ಹಾಗೂ ಸ್ಥಳೀಯ ನಾಗರಿಕರು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಸಾರ್ವಜನಿಕರು ಮತ್ತು ಪೊಲೀಸರ ನಡುವೆ ಕೆಲವು ಹೊತ್ತು ವಾಗ್ವಾದ ನಡೆಯಿತು.
ಬಳಿಕ ಸ್ಥಳಕ್ಕೆ ಬಂದ ಬಂಟ್ವಾಳ ನಗರ ಠಾಣಾ ಎಸ್ಸೈ ಅವಿನಾಶ್ ಬಂದು ಪರಿಸ್ಥಿತಿ ತಿಳಿಗೊಳಿಸಿದರು.