ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ 8 ನೇ ಕಂತನ್ನು ಬಿಡುಗಡೆ ಮಾಡಿದ ಪ್ರಧಾನಿ ಮೋದಿ

Update: 2021-05-14 08:22 GMT

ಹೊಸದಿಲ್ಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 8 ನೇ ಕಂತಿನ 20,000 ಕೋಟಿ ರೂ.ಗೂ ಅಧಿಕ ಮೊತ್ತವನ್ನು  9.5 ಕೋಟಿಗೂ ಹೆಚ್ಚು ರೈತ ಫಲಾನುಭವಿಗಳಿಗೆ ಬಿಡುಗಡೆ ಮಾಡಿದ್ದಾರೆ. ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ ಮೂಲಕ ಶುಕ್ರವಾರ ವೀಡಿಯೋ-ಕಾನ್ಫರೆನ್ಸಿಂಗ್ ಮೂಲಕ ಬಿಡುಗಡೆ ಮಾಡಲಾಗಿದೆ.

ಈ ಸಂದರ್ಭದಲ್ಲಿ ಪ್ರಧಾನಿ  6 ರೈತ-ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ  ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಕೂಡ ಈ ವೇಳೆ  ಉಪಸ್ಥಿತರಿದ್ದರು. ಪಶ್ಚಿಮ ಬಂಗಾಳವು ಇಂದು ಈ ಯೋಜನೆಗೆ ಸೇರ್ಪಡೆಗೊಂಡಿದ್ದು, ರಾಜ್ಯದ 7 ಲಕ್ಷಕ್ಕೂ ಹೆಚ್ಚು ರೈತರು ಇಂದು ಇದರ ಲಾಭ ಪಡೆಯುತ್ತಿದ್ದಾರೆ ಎಂದು ತೋಮರ್ ಹೇಳಿದರು.

ಪಿಎಂ-ಕಿಸಾನ್ ಯೋಜನೆಯಡಿ, ವಾರ್ಷಿಕವಾಗಿ 14 ಕೋಟಿ ಅರ್ಹ ಫಲಾನುಭವಿ ರೈತ ಕುಟುಂಬಗಳಿಗೆ ವರ್ಷಕ್ಕೆ 6000 ರೂ.ಗಳ ಆರ್ಥಿಕ ಲಾಭವನ್ನು ನೀಡಲಾಗುತ್ತದೆ.

ನಿಧಿಯನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ಈ ಸಂದರ್ಭದಲ್ಲಿ ಉತ್ತರ ಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ಮೇಘಾಲಯ, ಜಮ್ಮು- ಕಾಶ್ಮೀರ ಮತ್ತು ಅಂಡಮಾನ್ ಮತ್ತು ನಿಕೋಬಾರ್‌ನ ರಾಜ್ಯಗಳ 6 ರೈತರೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News