ಬ್ಯಾಂಕಿಂಗ್ ನೇಮಕಾತಿಗೆ ಆನ್‌ಲೈನ್ ತರಬೇತಿ
ಉಡುಪಿ, ಮೇ 14: ಕರಾಮುವಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವು ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ ಆನ್‌ಲೈನ್ ತರಬೇತಿಯನ್ನು ಆಯೋಜಿಸಿದ್ದು, ಮೈಸೂರಿನ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮೇ 15ರ ಶನಿವಾರ ಬೆಳಗ್ಗೆ 11:00ಕ್ಕೆ ಆನ್‌ಲೈನ್ ಮೂಲಕ ತರಬೇತಿ ಉದ್ಘಾಟಿಸಲಿದ್ದಾರೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವದ್ಯಾನಿಲಯವು ಇಂಥ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿಯನ್ನು ಆಯೋಜಿಸುತ್ತಿದ್ದು, ಇದರಿಂದ ಉತ್ತಮ ಫಲಿತಾಂಶ ಹೊರಬರುತ್ತಿದೆ. ಪ್ರಸ್ತುತ ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿಗೆ ಐಬಿಪಿಎಸ್ ವಿವಿಧ ಬ್ಯಾಂಕುಗಳಲ್ಲಿರುವ ಸಾವಿರಾರು ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕ ಮಾಡಿಕೊಳ್ಳುತ್ತಿವೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವದ್ಯಾಲಯ ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಅಧ್ಯಕ್ಷತೆ ವಹಿಸಲಿದ್ದು, ಕುಲಸಚಿವ ಪ್ರೊ.ಆರ್. ರಾಜಣ್ಣ ಉಪಸ್ಥಿ ತರಿರುವರು ಎಂದು ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.