ಬೀಡಿ ಉದ್ದಿಮೆ ಪುನಾರಾರಂಭಕ್ಕೆ ಸಚಿವ ಕೋಟ ಸೂಚನೆ
ಮಂಗಳೂರು, ಮೇ 14: ಕೊರೋನ 2ನೇ ಅಲೆಯಿಂದಾಗಿ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ 4 ಲಕ್ಷಕ್ಕೂ ಅಧಿಕ ಬೀಡಿ ಕಾರ್ಮಿಕರು ಕೆಲಸ ವಿಲ್ಲದೆ ಸಂಕಷ್ಟಕ್ಕೆ ಒಳಗಾಗಿದ್ದುದನ್ನು ಮನಗಂಡ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೀಡಿ ಉದ್ದಿಮೆ ಪುನಾರಾರಂಭಕ್ಕೆ ನೀಡಿದ್ದಾರೆ.
ಬೀಡಿ ಕಟ್ಟುವ ಕಾರ್ಮಿಕರು ಯಾವುದೇ ಕೆಲಸವಿಲ್ಲದೆ ಮನೆಯಲ್ಲೇ ಕೆಲಸ ನಿರ್ವಹಿಸುತ್ತಿದ್ದಾರೆ. ಬೀಡಿ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ದ.ಕ.ಜಿಲ್ಲಾಧಿಕಾರಿ ಮತ್ತು ಪೊಲೀಸ್ ಆಯುಕ್ತರ ಜೊತೆ ಚರ್ಚಿಸಿ, ಮಂಗಳೂರು ಸಹಾಯಕ ಕಾರ್ಮಿಕ ಆಯುಕ್ತರು ಮತ್ತು ಉಭಯ ಜಿಲ್ಲೆಯ ಬೀಡಿ ಉತ್ಪಾದಕರ ಸಭೆ ಕರೆದು ಕೋವಿಡ್ ನಿಯಮ ಉಲ್ಲಂಘಿಸದೆ ಬೀಡಿ ಉದ್ದಿಮೆಯನ್ನು ಪುನಾರಾರಂಭಿಸಲು ಸೂಚಿಸಿದ್ದಾರೆ.
ಬೀಡಿ ಉದ್ದಿಮೆಗೆ ಸಂಬಂಧಪಟ್ಟ ಗುತ್ತಿಗೆದಾರರು, ಲೇಬಲ್ ಕೆಲಸಗಾರರು ಮತ್ತು ಕಚೇರಿಯ ಸಿಬ್ಬಂದಿ ವರ್ಗ ಉದ್ದಿಮೆ ಸಂಸ್ಥೆಗೆ ಹೋಗಿ ಬರಲು, ಕಚ್ಛಾ ವಸ್ತುಗಳು ಮತ್ತು ಸಿದ್ಧಪಡಿಸಿದ ಬೀಡಿಗಳ ಸಾಗಾಣಿಕೆ ಮಾಡಲು ಅವಕಾಶ ನೀಡಿದ್ದಾರೆ.