ಸಾಲ ವಸೂಲಿಯ ಅವಧಿ ಮುಂದೂಡಲು ಸಚಿವ ಕೋಟ ಮನವಿ
Update: 2021-05-14 22:33 IST
ಮಂಗಳೂರು ಮೇ 14: ರಾಜ್ಯದ ವಿವಿಧ ಮೂಲಗಳಿಂದ ಸಾಲ ಪಡೆದ ಬಡವರು, ರೈತರು, ಕೂಲಿ ಕಾರ್ಮಿಕರು ಸೇರಿದಂತೆ ಅನೇಕರು ಕೋವಿಡ್ ಸಂಕಷ್ಟ ಕಾಲದಲ್ಲಿ ಸಾಲ ಮರುಪಾವತಿಸಲಾಗದಷ್ಟು ಆರ್ಥಿಕವಾಗಿ ಕಂಗೆಟ್ಟಿದ್ದಾರೆ. ಈ ಸಂದಿಗ್ಧ ಸ್ಥಿತಿಯಲ್ಲಿ ಸಾಲ ವಸೂಲಿಯ ಅವಧಿಯನ್ನು ಮುಂದೂಡಲು ಕ್ರಮ ವಹಿಸಬೇಕು ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ.
ವಿವಿಧ ಹಣಕಾಸು ಸಂಸ್ಥೆಗಳು ಹಾಗೂ ಖಾಸಗಿ ಲೇವಾದೇವಿದಾರರು ಸಾಲದ ಮರುಪಾವತಿಗೆ ಒತ್ತಾಯಿಸುತ್ತ್ತಿದ್ದಾರೆ. ಆದರೆ ಬಡಜನರು ಸಾಲ ಮರುಪಾತಿಸಲು ಅಶಕ್ತರಾಗಿದ್ದಾರೆ. ಆದ್ದರಿಂದ ರಾಜ್ಯದ ಎಲ್ಲಾ ಬ್ಯಾಂಕ್‌ಗಳು ಹಾಗೂ ಇತರ ಹಣಕಾಸು ಸಂಸ್ಥೆಗಳು ಮತ್ತು ಸಾಲ ನೀಡಿದ ಸಂಸ್ಥೆ ಗಳು ಸಾಲ ವಸೂಲಿ ಮಾಡಲು ಇನ್ನು 6 ತಿಂಗಳ ಅವಧಿ ಮುಂದೂಡಿ ಆದೇಶ ಹೊರಡಿಸಬೇಕು ಎಂದು ಮುಖ್ಯಮಂತ್ರಿಗೆ ಒತ್ತಾಯಿಸಿದ್ದಾರೆ.