ತೀವ್ರ ಚಂಡಮಾರುತವಾಗಿ 'ತೌಕ್ತೆ' ಗುಜರಾತ್ ಮೇಲೆ ಅಪ್ಪಳಿಸುವ ಭೀತಿ : ಹವಾಮಾನ ಇಲಾಖೆ

Update: 2021-05-15 03:37 GMT

ಹೊಸದಿಲ್ಲಿ: ಶುಕ್ರವಾರ ರಾತ್ರಿ ಲಕ್ಷದ್ವೀಪ ಸಮೀಪ ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ತೀವ್ರ ವಾಯುಭಾರ ಕುಸಿತದ ಪರಿಣಾಮವಾಗಿ ಸೃಷ್ಟಿಯಾಗಿರುವ ’ತೌಕ್ತೆ’ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡು ರವಿವಾರ ಮುಂಜಾನೆ ವೇಳೆಗೆ ಗಾಳಿಯ ವೇಗ 150-160 ರಿಂದ 175 ಕಿಲೋಮೀಟರ್ ಆಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಇದರ ಪರಿಣಾಮವಾಗಿ ಪಶ್ಚಿಮ ಕರಾವಳಿಯಲ್ಲಿ ವ್ಯಾಪಕ ಮಳೆ ಬೀಳಲಿದೆ ಎಂದು ಮುನ್ಸೂಚನೆ ನೀಡಿದೆ.

ಈ ಚಂಡಮಾರುತ ಗುಜರಾತ್ ಕರಾವಳಿಯನ್ನು ದಾಟಲಿದೆಯೇ ಅಥವಾ ಮೇ 18ರ ಒಳಗಾಗಿ ಮೊಟಕುಗೊಳ್ಳಲಿದೆಯೇ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ.

"ಮುಂದಿನ 12 ಗಂಟೆಗಳಲ್ಲಿ ಇದು ಭೀಕರ ಚಂಡಮಾರುತವಾಗಿ ಪರಿವರ್ತನೆಯಾಗುವ ಎಲ್ಲ ಸಾಧ್ಯತೆಗಳಿದ್ದು, ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ತೀವ್ರವಾಗಲಿದೆ. ಉತ್ತರ ಮತ್ತು ವಾಯವ್ಯ ದಿಕ್ಕಿನಲ್ಲಿ ಚಲಿಸುವ ಸಾಧ್ಯತೆ ಇದೆ" ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News