ಕೋವಿಡ್ ಸಂಬಂಧಿತ ಸಮಸ್ಯೆಯಿಂದ ಮಮತಾ ಬ್ಯಾನರ್ಜಿಯ ಸಹೋದರ ನಿಧನ

Update: 2021-05-15 07:53 GMT

ಕೋಲ್ಕತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಿರಿಯ ಸಹೋದರ ಆಶಿಮ್ ಬ್ಯಾನರ್ಜಿ ಕೋವಿಡ್ ಸಂಬಂಧಿತ ಸಮಸ್ಯೆಗಳಿಂದ ಕೋಲ್ಕತ್ತಾದ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ನಿಧನರಾದರು. ಅವರಿಗೆ 60 ವರ್ಷ ವಯಸ್ಸಾಗಿತ್ತು.

"ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿತ್ತು.ಚಿಕಿತ್ಸೆಗೆ ಒಳಗಾಗಿದ್ದರು" ಎಂದು ಕೋಲ್ಕತ್ತಾದ ಮೆಡಿಕಾ ಸೂಪರ್‌ಸ್ಪೆಷಾಲಿಟಿ ಆಸ್ಪತ್ರೆಯ ಅಧ್ಯಕ್ಷ ಡಾ.ಅಲೋಕ್ ರಾಯ್ ಅವರು ಸುದ್ದಿ ಸಂಸ್ಥೆ ಪಿಟಿಐಗೆ ಹೇಳಿದ್ದಾರೆ.

ಕೋವಿಡ್ ಪ್ರೋಟೋಕಾಲ್ ಗಳ ಪ್ರಕಾರ ಇಂದು ಮಧ್ಯಾಹ್ನ ಅಂತಿಮ ವಿಧಿಗಳನ್ನು ನಡೆಸಲಾಗುವುದು.

ಪಶ್ಚಿಮ ಬಂಗಾಳದಲ್ಲಿ ಕಳೆದ 24 ಗಂಟೆಗಳಲ್ಲಿ 20,846 ಹೊಸ ಕೋವಿಡ್ -19 ಪ್ರಕರಣಗಳು ವರದಿ ಯಾಗಿದೆ, 136 ರೋಗಿಗಳು ಸಾವನ್ನಪ್ಪಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News