×
Ad

ಎಸ್ ಸಿಡಿಸಿಸಿ ಬ್ಯಾಂಕ್‌ ಶಾಖಾ ವ್ಯವಸ್ಥಾಪಕ ಜಯರಾಜ್ ಶೆಟ್ಟಿ ನಿಧನ

Update: 2021-05-15 16:47 IST

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸ್ಯಾಬರೆಕಟ್ಟೆ ಶಾಖಾ ವ್ಯವಸ್ಥಾಪಕರಾಗಿದ್ದ ಜಯರಾಜ್ ಶೆಟ್ಟಿ (46) ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು.

ಅವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷರೂ ಆಗಿದ್ದರು. ಕುಂದಾಪುರ ತಾಲೂಕಿನ ಕಂಚನೂರು ಕರ್ಕುಂಜೆ ತೋಟದಮನೆ ನಿವಾಸಿಯಾಗಿರುವ ಇವರು ತಾಯಿ, ಪತ್ನಿ,  ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

ಸಂತಾಪ :  ಜಯರಾಜ್ ಶೆಟ್ಟಿ ನಿಧನಕ್ಕೆ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸಂತಾಪ ಸೂಚಿಸಿದ್ದಾರೆ. ಬ್ಯಾಂಕಿನ ಆಡಳಿತ ಮಂಡಳಿಯ ನಿರ್ದೇಶಕರು , ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಬಿ. ಹಾಗೂ ಬ್ಯಾಂಕಿನ ಸಿಬ್ಬಂದಿ ವರ್ಗ ಸಂತಾಪ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News