×
Ad

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ

Update: 2021-05-15 18:20 IST

ಮಂಗಳೂರು, ಮೇ 15: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ರ ಹುಟ್ಟುಹಬ್ಬದ ಪ್ರಯುಕ್ತ ಮಂಗಳೂರು ಸರ್ವ ಕಾಲೇಜ್ ವಿದ್ಯಾರ್ಥಿ ಸಂಘದ ವತಿಯಿಂದ ರೆಡ್‌ಕ್ರಾಸ್ ಸಹಯೋಗದೊಂದಿಗೆ ಶನಿವಾರ ನಗರದ ಜನತಾ ಲಂಚ್‌ಹೋಮ್‌ನಲ್ಲಿ ರಕ್ತದಾನ ಶಿಬಿರ ನಡೆಯಿತು.

ಕೋವಿಡ್-19 ಪ್ರಕರಣಗಳು ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್‌ಡೌನ್ ಜಾರಿಯಲ್ಲಿರುವುದರಿಂದ ಜಿಲ್ಲೆಯ ರಕ್ತನಿಧಿ ಕೇಂದ್ರಗಳಲ್ಲಿ ರಕ್ತದ ಸಂಗ್ರಹ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಇದನ್ನು ಮನಗಂಡ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಿಥುನ್ ರೈ ಕೆಪಿಸಿಸಿ ಅಧ್ಯಕ್ಷರ ಹುಟ್ಟುಹಬ್ಬವನ್ನು ರಕ್ತದಾನ ಮಾಡುವ ಮೂಲಕ ಆಚರಿಸಿದರು.

ಈ ಸಂದರ್ಭ ಮಾಜಿ ಶಾಸಕ ಜೆಆರ್ ಲೋಬೊ, ಮನಪಾ ಸದಸ್ಯರಾದ ಪ್ರವೀಣ್‌ಚಂದ್ರ ಆಳ್ವ, ಎಸಿ ವಿನಯರಾಜ್, ಅನಿಲ್ ಕುಮಾರ್, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಮೆರಿಲ್ ರೇಗೊ, ಕಾಂಗ್ರೆಸ್ ಕೇರ್ಸ್ ಜಿಲ್ಲಾ ಸಂಚಾಲಕ ಸುಹೈಲ್ ಕಂದಕ್, ಸಿಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಸಾಲಿಯಾನ್, ವಿಶ್ವಾಸ್ ಕುಮಾರ್ ದಾಸ್, ವಿದ್ಯಾರ್ಥಿ ಕಾಂಗ್ರೆಸ್ ಅಧ್ಯಕ್ಷ ಸವಾದ್ ಸುಳ್ಯ, ಟಿಕೆ ಸುದೀರ್, ಚೇತನ್ ಉರ್ವ, ಸುನೀಲ್ ಕುಮಾರ್ ತಂದೊಳಿಗೆ, ರಾಕೇಶ್ ದೇವಾಡಿಗ, ನೌಶೀನ್ ಅಬ್ದುಲ್ಲಾ, ಅನ್ಸಾರುದ್ದೀನ್ ಸಾಲ್ಮರ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News