ಕೋವಿಡ್ ನಿರ್ವಹಣೆ: ಮೇ 17ರಂದು ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ವಿಡಿಯೋ ಸಂವಾದ

Update: 2021-05-15 15:28 GMT

ಬೆಂಗಳೂರು, ಮೇ 15: ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಸೋಂಕು ವ್ಯಾಪ್ತಿಸುತ್ತಿದ್ದು, ಸೋಂಕಿನ ನಿರ್ವಹಣೆ ದೃಷ್ಟಿಯಿಂದ ಮುಖ್ಯಮಂತ್ರಿ ಯಡಿಯೂರಪ್ಪ ಮೇ 17ರ ಸೋಮವಾರ ಎಲ್ಲ ಜಿಲ್ಲಾಧಿಕಾರಿಗಳು, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಎಸ್ಟಿಗಳು ಮತ್ತು ಜಿಲ್ಲಾ ಆರೋಗ್ಯ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ.

ಮೇ 17ರ ಸೋಮವಾರ ಸಂಜೆ 4.30ಕ್ಕೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ವಿಡಿಯೋ ಸಂವಾದ ಏರ್ಪಡಿಸಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು, ಉಸ್ತುವಾರಿ ಕಾರ್ಯದರ್ಶಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದು, ಕೋವಿಡ್ ಸೋಂಕಿನ ನಿರ್ವಹಣೆ, ಕೋವಿಡ್ ಲಸಿಕೆ ಹಾಗೂ ಲಾಕ್‍ಡೌನ್ ಅನುಷ್ಟಾನ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಕೋವಿಡ್ ಕಾರ್ಯಪಡೆಯ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ಕಂದಾಯ ಸಚಿವ ಆರ್.ಅಶೋಕ್, ಗೃಹ ಹಾಗೂ ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಮತ್ತು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ವಿಡಿಯೋ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಗೊತ್ತಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News