​ದ.ಕ. ಜಿಲ್ಲೆ : ಕೋವಿಡ್‌ಗೆ ಮತ್ತೆ ಮೂವರು ಬಲಿ; 1,787 ಮಂದಿಗೆ ಕೊರೋನ ಪಾಸಿಟಿವ್

Update: 2021-05-15 15:29 GMT

ಮಂಗಳೂರು, ಮೇ 15: ದ.ಕ. ಜಿಲ್ಲೆಯಲ್ಲಿ ಶನಿವಾರ ಮತ್ತೆ 3 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 808ಕ್ಕೇರಿದೆ. ಅಲ್ಲದೆ ಶನಿವಾರ ಜಿಲ್ಲೆಯಲ್ಲಿ 1787 ಮಂದಿಗೆ ಕೊರೋನ ಸೋಂಕು ದೃಢಪಟ್ಟಿವೆ. 1,490 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಜಿಲ್ಲೆಯಲ್ಲಿ ಈವರಗೆ 8,01,768 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 7,38,411 ಮಂದಿಯ ವರದಿ ನೆಗೆಟಿವ್ ಬಂದಿದೆ. ಅಲ್ಲದೆ 63,357 ಮಂದಿ ಕೊರೋನ ಸೋಂಕಿಗೊಳಗಾಗಿದ್ದಾರೆ. ಈ ಪೈಕಿ 49,355 ಮಂದಿ ಗುಣಮುಖರಾಗಿದ್ದಾರೆ. ಸದ್ಯ 13,194 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾಸ್ಕ್ ನಿಯಮ ಉಲ್ಲಂಘಿಸಿದ 54,537 ಮಂದಿಯಿಂದ 56,96,030 ರೂ. ದಂಡ ವಸೂಲು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News